ಪ್ರಗತಿ ಪರಿಶೀಲನಾ ಸಭೆ

(ಸಂಜೆವಾಣಿ ವಾರ್ತೆ)
ನವಲಗುಂದ,ಆ23: ಶಾಸಕ ಎನ್.ಹೆಚ್.ಕೋನರಡ್ಡಿ ಅವರ ಅಧ್ಯಕ್ಷತೆಯಲ್ಲಿ ನವಲಗುಂದ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ ನಗರದ ದೇಶಪಾಂಡೆನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ನಡೆಯಿತು. ಈ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ, ತಮ್ಮ ಇಲಾಖಾ ಕಾರ್ಯ ಪ್ರಗತಿ ಕುರಿತು ಮಾಹಿತಿ ನೀಡಿದರು.
ಇದೇ ವೇಳೆ ಶಾಸಕ ಕೋನರಡ್ಡಿಯವರು ಕ್ಷೇತ್ರದಲ್ಲಿ ಪಂಚ ವಾರ್ಷಿಕ ಯೋಜನೆಯನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಸರ್ಕಾರದ ಯೋಜನೆಗಳನ್ನು ತಲುಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ವೇಳೆ ಹುಬ್ಬಳ್ಳಿ ತಾಲೂಕಿನ 26 ಗ್ರಾಮ ಪಂಚಾಯತ್ ಗಳಿಗೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಅಭಿನಂದನಾ ಸಮಾರಂಭ ಕೂಡಾ ನಡೆಯಿತು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶಿಲ್ದಾರ ಪ್ರಕಾಶ ನಾಶಿ, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳು ಉಪಸ್ಥಿತರಿದ್ದರು.