ಪ್ರಗತಿ ಪರಿಶೀಲನಾ ಸಭೆ

ಗದಗ, ನ5: ಗದಗ ನಗರದಲ್ಲಿ ನಡೆದ ಕರ್ನಾಟಕ ಸಂಭ್ರಮ-50 ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯರವರು ಗದಗ ಜಿಲ್ಲಾ ಪಂಚಾಯತ ಸಭಾಂಗಣ ವಿ.ಸಿ. ಹಾಲ್‍ದಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳ ಮೀನುಗಾರಿಕೆ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ಜಿಲ್ಲಾವಾರು ಪ್ರಗತಿಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ನಿಗದಿತ ಅವಧಿಯಲ್ಲಿ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಲು ಸೂಚಿಸಿದರು. ಇಲಾಖೆಯ ಕುಂದು-ಕೊರತೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮೀನುಗಾರಿಕೆ ನಿರ್ದೇಶಕರಾದ ದಿನೇಶ ಕಳ್ಳೇರ್ರವರು ಉಪಸ್ಥಿತರಿದ್ದರು. ಮೀನುಗಾರಿಕೆ ಜಂಟಿ ನಿರ್ದೇಶಕರುಗಳು, ಮೀನುಗಾರಿಕೆ ಉಪ ನಿರ್ದೇಶಕರುಗಳು, ಮೀನುಗಾರಿಕೆ ಸಹಾಯಕ ನಿರ್ದೇಶಕರುಗಳು ಹಾಗೂ ಮೀನುಮರಿ ಉತ್ಪಾದನಾ ಕೇಂದ್ರಗಳ ಅಧಿಕಾರಿಗಳು ಹಾಜರಿದ್ದರು.