ಪ್ರಗತಿ ಪರಿಶೀಲನಾ ಸಭೆ

ಧಾರವಾಡ,ಜು30 : ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ ಎಸ್ ನಾಗಾಭರಣ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಆಡಳಿತದಲ್ಲಿ ಕನ್ನಡ ಭಾಷೆ ಬಳಕೆ ಕುರಿತು ಅಧಿಕಾರಿಗಳಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ ಎಸ್ ನಾಗಾಭರಣ ಮಾಹಿತಿ ಪಡೆದರು. ಸಭೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಧಾರವಾಡ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.