ಪ್ರಚಾರದ ಅಖಾಡಕ್ಕೆ ಬೊಮ್ಮಾಯಿ

ಬೆಂಗಳೂರು,ಏ.೨೨:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ನಾಳೆಯಿಂದ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ನಾಳೆ ಯಲಹಂಕದಿಂದ ರೋಡ್ ಶೋ ಆರಂಭ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಾಳೆ ಬೆಳಿಗ್ಗೆಯಿಂದಲೇ ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ, ತುಮಕೂರು, ಅರಸೀಕೆರೆಗಳಲ್ಲೂ ಪ್ರಚಾರ ಮಾಡುವುದಾಗಿ ಹೇಳಿದರು.
ಬೆಳಗಾವಿ, ಗುಲ್ಬರ್ಗಾ, ಮೈಸೂರು ಭಾಗಗಳಲ್ಲೂ ಮುಂದಿನ ದಿನಗಳಲ್ಲಿ ಚುನಾವಣೆ ಯಾತ್ರೆ ನಡೆಸುವುದಾಗಿ ಹೇಳಿದ ಅವರು, ರಾಜ್ಯದ ವಿವಿಧೆಡೆ ರೋಡ್ ಶೋ ನಡೆಸುವ ಕಾರ್ಯಕ್ರಮವೂ ಸಿದ್ಧವಾಗಿದೆ. ಅಲ್ಲೆಲ್ಲ ಪ್ರಚಾರ ನಡೆಸುವುದಾಗಿ ಹೇಳಿದರು.
ಪ್ರಧಾನಿ ನರೇಂದ್ರಮೋದಿ ಅವರ ಪ್ರವಾಸದ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ. ಎಲ್ಲೆಲ್ಲಿ ಪ್ರಧಾನಿಗಳ ಪ್ರಚಾರ ನಡೆಸಬೇಕು ಎಂಬ ಬಗ್ಗೆ ಪಕ್ಷ ರೂಪು-ರೇಷೆಗಳನ್ನು ಅಂತಿಮಗೊಳಿಸಲಿದೆ ಎಂದು ಹೇಳಿದರು.
ನಟ ಸುದೀಪ್ ಸಹ ಬಿಜೆಪಿ ಪರ ಪ್ರಚಾರ ನಡೆಸುತ್ತಾರೆ. ಇನ್ನೊಂದೆರೆಡು ದಿನಗಳಲ್ಲಿ ಸುದೀಪ್‌ರವರು ಎಲ್ಲೆಲ್ಲಿ ಪ್ರಚಾರ ಮಾಡುತ್ತಾರೆ ಎಂಬುದು ಅಂತಿಮವಾಗಲಿದೆ ಎಂದು ಹೇಳಿದರು.