ಪ್ರಚೋದನಕಾರಿ ಭಾಷಣ : ಈಶ್ವರಪ್ಪ ವಿರುದ್ದ ಕೇಸ್ ದಾಖಲು!

ಶಿವಮೊಗ್ಗ, ಅ. ೧೩: ಪ್ರಚೋದನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ದ ಶಿವಮೊಗ್ಗ ನಗರದ ಜಯನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ಎಫ್.ಐ.ಆರ್. ಮಾಡಿದ್ದಾರೆ.
ರಾಗಿಗುಡ್ಡ ಘಟನೆ ಖಂಡಿಸಿ ಗುರುವಾರ ಶಿವಮೊಗ್ಗ ನಗರದ ಬಾಲರಾಜ ಅರಸ್ ರಸ್ತೆಯಲ್ಲಿ ಬಿಜೆಪಿ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ, ತಮ್ಮ ಭಾಷಣದ ವೇಳೆ ಕೆ.ಎಸ್.ಈಶ್ವರಪ್ಪ ಅವರು ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿ ಮಾತನಾಡಿರುವ ಆರೋಪದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.