ಪ್ರಚೋದನಕಾರಿ ಭಾಷಣ: ಚಂದು ಪಾಟೀಲ ವಿರುದ್ಧ ಪ್ರಕರಣ

ಕಲಬುರಗಿ,ಮೇ.27-ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ ವಿರುದ್ಧ ಇಲ್ಲಿನ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಸಭೆ ಚುನಾವಣೆ ಗುಲ್ಬರ್ಗ ದಕ್ಷಿಣ ಕ್ಷೇತ್ರದ ಕ್ಷಿಪ್ರ ಸಂಚಾರ ದಳದ ಮುಖ್ಯಸ್ಥ ಎಂ.ಡಿ.ಸಮಿಯೋದ್ದಿನ್ ದೂರು ನೀಡಿದ್ದಾರೆ. ಕೋಟನೂರು ಗ್ರಾಮದಲ್ಲಿ ನಡೆದ ಹಲ್ಲೆ ಘಟನೆ ಖಂಡಿಸಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ವೇಳೆ ಚಂದು ಪಾಟೀಲ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರತಿಭಟನೆ ವೇಳೆ ವಿಡಿಯೋ ಕ್ಲಿಪ್ ದೃಶ್ಯಾವಳಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಸಿದ್ದು, ಅವರ ವಿರುದ್ಧ ಕ್ರಮ ಜರುಗಿಸುವಂತೆ ದೂರಿನಲ್ಲಿ ತಿಳಿಸಿದ್ದಾರೆ.