ಪ್ರಜಾಪ್ರಭುತ್ವದ ಸಂವಿಧಾನ ಉಳಿವಿಗಾಗಿ ನಾವೆಲ್ಲರೂ ಬದ್ದರಾಗೋಣ

ಲಿಂಗಸೂಗೂರು.ಫೆ.೧೦- ಲಿಂಗಸೂಗೂರು ತಾಲೂಕಿನ ಯರಜಂತಿ ಕ್ರಾಸ್ ಹತ್ತಿರ ಸಂವಿಧಾನ ಜಾಗೃತಿ ಜಾಥಾ ರಥ ಯಾತ್ರೆಯನ್ನು ಸ್ವಾಗತಿಸಿದ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪುರ ರವರು ಸುದ್ದಿಗಾರರೊಂದಿಗೆ ಮಾತನಾಡಿ, ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ವಿದ್ವಾಂಸ ಡಾ.ಬಾಬ ಸಾಹೇಬ ಅಂಬೇಡ್ಕರ್ ಬರೆದ ಸಂವಿಧಾನ ನಮ್ಮೆಲ್ಲರ ಪಾಲಿಗೆ ಇದೊಂದು ಇತಿಹಾಸ ದೇಶದಲ್ಲಿ ಪ್ರಜಾಪ್ರಭುತ್ವ ಉಳಿವಿಗಾಗಿ ನಾವೆಲ್ಲರೂ ಶ್ರಮಿಸಬೇಕು ಹಾಗೂ ಸಂವಿಧಾನವನ್ನು ಪ್ರತಿಯೊಬ್ಬ ಪ್ರಜೆಯೂ ಸಂವಿಧಾನ ಬಗ್ಗೆ ಹೆಚ್ಚಿನ ಜ್ಞಾನವನ್ನು ಪಡೆಯಲು ಸಂವಿಧಾನದ ಮಹತ್ವವನ್ನು ನಾವು ತಿಳಿಯಬೇಕು ಎಂದು ಹೇಳಿದರು.
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಸಂವಿಧಾನ ಜಾಗೃತಿ ಅಭಿಯಾನವು ಇಂದು ಪ್ರತಿ ಗ್ರಾಮಗಳಲ್ಲಿ ಜಾಥಾ ಸಂಚರಿಸುವ ಮೂಲಕ ಗ್ರಾಮೀಣ ಜನರಿಗಾಗಿ ಸಂವಿಧಾನದ ಮಹತ್ವವನ್ನು ಸಾರುವ ಮೂಲಕ ಜ್ಞಾನ ಹಸಿವು ನೀಗಿಸುವ ನಿಟ್ಟಿನಲ್ಲಿ ಈ ಜಾಥಾ ರಥ ಯಾತ್ರೆಗೆ ಗ್ರಾಮಗಳಲ್ಲಿ ಯಶಸ್ಸು ಕಾಣುತ್ತಿದೆ ಅದಕ್ಕೆ ಈ ಗ್ರಾಮದ ಜನರೆ ಸಾಕ್ಷಿಯಾಗಿದೆ.
ಭಾರತದ ಸಂವಿಧಾನ ಜಗತ್ತಿಗೆ ಮಾದರಿ ಸಂವಿಧಾನಕ್ಕೆ ತಕ್ಕಂತೆ ನಾವು ನಡೆದುಕೊಂಡರೆ ಸಂವಿಧಾನ ಪಿತಾಮಹ ಅಂಬೇಡ್ಕರ್ ರವರಿಗೆ ಗೌರವ ನೀಡಿದಂತೆ ಆಗುತ್ತದೆ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಬಗ್ಗೆ ಭಕ್ತಿ ಭಾವ ಹೊಂದಿರಬೇಕು ಎಂದು ರಾಯಚೂರು ಕೊಪ್ಪಳ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪುರ ಅಭಿಮತ ವ್ಯಕ್ತಪಡಿಸಿದರು..
ನಾವು ಶಾಸಕರು ಆಗಬೇಕಾದರೆ ಸಂವಿಧಾನ ಕಾರಣವಾಗಿದೆಸಂವಿಧಾನ ಉಳಿಸಲು ಇಂದು ನಮ್ಮೆಲ್ಲರ ಕರ್ತವ್ಯ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ಯಾರಂಟಿ ಯೋಜನೆಗಳು ಮಹಿಳೆಯರಿಗೆ ಶಕ್ತಿ ತುಂಬಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಹಾಗೂ ಸಚಿವ ಸಂಪುಟ ಸಹೋದ್ಯೋಗಿಗಳ ಗ್ಯಾರಂಟಿ ಯೋಜನೆಗಳು ಮಹಿಳೆಯರ ಸಬಲೀಕರಣಕ್ಕೆ ಕಾರಣವಾಗಿದೆ ಮತ್ತು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಶರಣಗೌಡ ಪಾಟೀಲ ಬಯ್ಯಾಪುರ ಸಂಜೆವಾಣಿಗೆ ತಿಳಿಸಿದರು.