
ರಾಯಚೂರು,ಸೆ.೧೧- ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಭಾರತದ ಸಂವಿಧಾನದ ಪೀಠಿಕೆಯನ್ನು ಎಲ್ಲರೂ ಸೇರಿ ಓದುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಸೆ.೧೧ರ(ಸೋಮವಾರ) ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದ ಕಚೇರಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಜಾಪ್ರಭುತ್ವ ಕಾರ್ಯಕ್ರಮದ ನಿಮಿತ್ಯ ಈಗಾಗಲೇ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಆನ್ಲೈನ್ ರಿಜಿಸ್ಟ್ರೇ?ನ್ ಪ್ರಕ್ರಿಯೆ ಪ್ರಾರಂಭವಾಗಿದ್ದು ಎಲ್ಲಾ ಶಾಲಾ ಕಾಲೇಜುಗಳು ಕಚೇರಿಗಳು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ರೆಜಿಸ್ಟ್ರೇ?ನ್ ಮಾಡುವುದರೊಂದಿಗೆ ಕಾರ್ಯಕ್ರಮದ ಭಾಗವಹಿಸುವಿಕೆಯನ್ನು ಅಧಿಕೃತಗೊಳಿಸಬೇಕೆಂದು ತಿಳಿಸಿದರು.
ಸೆ.೧೫ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದ ರೂಪರೇ?ಗಳನ್ನು ಮತ್ತು ಜವಾಬ್ದಾರಿಗಳನ್ನು ವಿವಿಧ ಇಲಾಖೆಗಳಿಗೆ ನೀಡಲಾದ ಜವಾಬ್ದಾರಿಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಿಒಸಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿಡಿಯೋ ಮತ್ತು ಫೋಟೋಗಳನ್ನು ಇಲಾಖೆಯಿಂದ ತಮಗೆ ಶೇರ್ ಮಾಡುವ ಲಿಂಕಿಗೆ ಅಪ್ಲೋಡ್ ಮಾಡುವುದರ ಮೂಲಕ ಪ್ರಮಾಣ ಪತ್ರಗಳನ್ನು ಪಡೆಯಬಹುದಾಗಿದ್ದು ಎಲ್ಲರೂ ಸಕ್ರಿಯವಾಗಿ ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ್ ಪೋತದಾರ್, ಪರಿಶಿ? ಪಂಗಡಗಳ ಕಲ್ಯಾಣಾಧಿಕಾರಿ ರಾಜೇಂದ್ರ ಜಲ್ದಾರ್, ಹಿಂದುಳಿದ ವರ್ಗಗಳ ಕಲ್ಯಾಣಾಕಾರಿ ವಾಲ್ಮೀಕಿ ಪವಾರ್, ಅಲ್ಪಸಂಖ್ಯಾತರ ಕಲ್ಯಾಣಾಕಾರಿ ಸಂಗಮೇಶ್ವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ ಸೇರಿದಂತೆ ನಗರಸಭೆ, ಕಂದಾಯ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪ್ರಾಂಶುಪಾಲರುಗಳು ಉಪಸ್ಥಿತರಿದ್ದರು.