ಪ್ರಜಾಪ್ರಭುತ್ವ ರಾಷ್ಟçದಲ್ಲಿ ಪ್ರಜೆಗಳೇ ಪ್ರಭುಗಳು

ಚಿತ್ರದುರ್ಗ.ಮಾ.೧೫: ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಪ್ರಜೆಗಳೇ ನಿಜವಾದ ಪ್ರಭುಗಳು ಎಂದು ಡಯಟ್‌ನ ಉಪ ಪ್ರಾಚಾರ್ಯ ಡಿ.ಆರ್.ಕೃಷ್ಣಮೂರ್ತಿ ಹೇಳಿದರು. ನಗರದ ಡಯಟ್‌ನಲ್ಲಿ ಮಖ್ಯ ಚುನಾವಣಾಧಿಕಾರಿ, ಕರ್ನಾಟಕ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಚಿತ್ರದುರ್ಗ ವತಿಯಿಂದ ಮಂಗಳವಾರ ಆಯೋಜಿಸಿದ್ದ ಮತದಾರರ ಸಾಕ್ಷರತಾ ಸಂಘಗಳ ಹೋಬಳಿ ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಮತದಾನ ನಮ್ಮ ಪವಿತ್ರ ಹಕ್ಕು. ಯಾವುದೇ ಆಮಿಷಗಳಿಗೆ ಒಳಗಾಗದೆ ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಮತ ಹಾಕಬೇಕು ಎಂದರು.ಜಿಲ್ಲಾ ಮಟ್ಟದ ಸ್ವೀಪ್ ನೋಡಲ್ ಅಧಿಕಾರಿ ಸಿ.ಎಸ್.ವೆಂಕಟೇಶಪ್ಪ ಮಾತನಾಡಿ, ಪ್ರಜಾಪ್ರಭುತ್ವದ ಬಹು ಮುಖ್ಯ ಸಂಗತಿ ಮತದಾನ ಪ್ರಕ್ರಿಯೆ. ಪ್ರತಿಯೊಂದು ಮತವು ಅಮೂಲ್ಯವಾಗಿದ್ದು ಮತದಾನ ಪ್ರಮಾಣ ಹೆಚ್ಚಿಸಲು ಮತದಾರರ ಸಾಕ್ಷರತಾ ಸಂಘ, ಚುನಾವಣಾ ಜಾಗೃತಿ ಸಂಘಗಳ ಮೂಲಕ ಮತಗಟ್ಟೆ ಅಧಿಕಾರಿಗಳು ಇ.ಎಲ್.ಸಿ ಸಂಘದ ಸಂಚಾಲಕರು ಮತದಾರರಲ್ಲಿ ಜಾಗೃತಿ ಮೂಡಿಸಬೇಕು. ಮತದಾನ ಪ್ರಮಾಣ ಹೆಚ್ಚಿಸುವುದು ಸ್ವೀಪ್ (SಗಿಇಇP- sಥಿsಣemಚಿಣiಛಿ voಣeಡಿs ಇಜuಛಿಚಿಣioಟಿ ಚಿಟಿಜ ಇಟeಛಿಣoಡಿಚಿಟ ಠಿಚಿಡಿಣiಛಿiಠಿಚಿಣioಟಿ) ಕಾರ್ಯಕ್ರಮದ ಉದ್ದೇಶವಾಗಿದೆ. ಬಿ.ಎಲ್.ಓ ಮತ್ತು ಸಂಚಾಲಕರು ತರಬೇತಿಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ಮತದಾನ ಪ್ರಮಾಣ ಹೆಚ್ಚಿಸಲು ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದರು.ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಸಂಪತ್ ಕುಮಾರ್, ತಾಲೂಕು ಇ.ಎಲ್.ಸಿ ನೋಡಲ್ ಅಧಿಕಾರಿ ಇನಾಯತ್, ಸಂಪನ್ಮೂಲ ವ್ಯಕ್ತಿಗಳಾದ ಎಸ್.ಬಸವರಾಜು, ಭೀಮಪ್ಪ, ರೇವಣ್ಣ, ಮಲ್ಲಿಕಾರ್ಜುನ, ರೂಪಾದೇವಿ, ಉಪನ್ಯಾಸಕ ಕೆ.ಎಂ. ನಾಗರಾಜು, ತಾಂತ್ರಿಕ ಸಹಾಯಕರಾದ ಕೆ.ಆರ್.ಲೋಕೇಶ್, ಆರ್.ಲಿಂಗರಾಜು ಮತ್ತು ಚಿತ್ರದುರ್ಗ ಕಸಬಾ ಹೋಬಳಿಯ ಬಿ.ಎಲ್.ಓ ಗಳು, ಇ.ಎಲ್.ಸಿ ಸಂಚಾಲಕರು ಇದ್ದರು.