ಪ್ರಜಾ ಧ್ವನಿ ಬಸ್ ಯಾತ್ರೆಗೆ ಚಾಲನೆ

ನವ ಕರ್ನಾಟಕ ನಿರ್ಮಾಣ ಮಾಡುವ ಸಂಕಲ್ಪದೊಂದಿಗೆ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರಜಾ ಧ್ವನಿ ಬಸ್ ಯಾತ್ರೆಗೆ ಬೆಳಗಾವಿಯ ವೀರಸೌಧದಲ್ಲಿ ಇಂದು ಚಾಲನೆ ನೀಡಲಾಯಿತು. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಬಿ.ಕೆ. ಹರಿಪ್ರಸಾದ್, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಸೇರಿದಂತೆ ಪಕ್ಷದ ಮುಖಂಡರು ಇದ್ದರು.