ಪ್ರಜ್ವಲ್ ಪ್ರಕರಣ ಸಿಬಿಐ ತನಿಖೆಗೆ ಬಿಎಸ್‌ವೈ ಆಗ್ರಹ

(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು,ಮೇ೧೧;ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಬೇಕಿದ್ದರೆ ಅದನ್ನು ಸಿಬಿಐಗೆ ಕೊಡಬೇಕು, ಬಹುತೇಕ ಜನರ ಅಭಿಪ್ರಾಯವೂ ಇದೆ ಆಗಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ ಯಡಿಯೂರಪ್ಪವರು ಅದು ಮುಖ್ಯಮಂತ್ರಿಗಳ ಅಭಿಪ್ರಾಯ ನನ್ನ ಪ್ರಕಾರ ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದರು.
ರೈತರ ಸಾಲ ಮನ್ನಾ
ರಾಜ್ಯದಲ್ಲಿ ಬರಗಾಲ ಇರುವುದರಿಂದ ರೈತರ ಸಾಲಮನ್ನಾ ಮಾಡಬೇಕು ಎಂದು ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಒತ್ತಾಯಿಸಿದರು.
ಮಾಜಿ ಸಚಿವ ಈಶ್ವರಪ್ಪರವರ ಟೀಕೆಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಯಡಿಯೂರಪ್ಪ ಅವರು ಈ ಬಗ್ಗೆ ಮಾತನಾಡಲು ಬಯಸಲ್ಲ,ಶಿವಮೊಗ್ಗದಲ್ಲಿ ಬಿ.ವೈ ರಾಘವೇಂದ್ರ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದರು.
ಮೈತ್ರಿ ಅಭಾದಿತ
ಪ್ರಜ್ವಲ್ ಪ್ರಕರಣದಿಂದ ಬಿಜೆಪಿ ಜೆಡಿಎಸ್ ಮೈತ್ರಿಗೆ ಯಾವುದೇ ಧಕ್ಕೆಯಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಮುಂದುವರೆಯಲಿದ್ದು, ಜೆಡಿಎಸ್ ಗೆ ೨ ಸ್ಥಾನ ಮತ್ತು ಬಿಜೆಪಿ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜೊತೆ ಚರ್ಚಿಸಿ ತೀರ್ಮಾನವಾಗಲಿದೆ ಎಂದರು.