ಪ್ರತಿಜ್ಞಾ ವಿಧಿ ಬೋಧನೆ


ಸಂಜೆ ವಾಣಿ ವಾರ್ತೆ
ಕೊಟ್ಟೂರು, ಸೆ.16: ಪಟ್ಟಣದ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ  ಪ್ರಯುಕ್ತ  ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ ರವಿಕುಮಾರ್ ವಿದ್ಯಾರ್ಥಿಗಳಿಗೆ ಭಾರತ ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾವಿಧಿ ಬೋಧಿಸಿ,  ಹಾಗೂ  ಸರ್ ಎಂ ವಿಶ್ವೇಶ್ವರಯ್ಯನವರ ಕುರಿತು ಮಾತನಾಡಿದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಕೆ .ಪಿ .ರಾಧಾಸ್ವಾಮಿ ಪ್ರಾಸ್ತಾವಿಕ ನುಡಿಯನ್ನು ನುಡಿದರು.
ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಪ್ರಶಾಂತ್ ಕುಮಾರ್ ಎಂ ಹೆಚ್, ಹಿರಿಯ ಪ್ರಾಧ್ಯಾಪಕರಾದ ಪ್ರೊ. ರವೀಂದ್ರ ಗೌಡ , ಡಾ.ಜೆ .ಬಿ. ಸಿದ್ದನಗೌಡ, ಪ್ರೊ.ಎಸ್.ಕೃಷ್ಣಪ್ಪ, ಸಿ ಬಸವರಾಜ್, ಡಾ.ಚೇತನ್ ಚೌಹಾನ್,  ಡಾ. ಶಿವಕುಮಾರ, ಏ. ನಿಜಲಿಂಗ ಸ್ವಾಮಿ, ಪದವಿ  ಹಾಗೂ  ಪದವಿ ಪೂರ್ವಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ  ಉಪಸ್ಥಿತರಿದ್ದರು.