ಪ್ರತಿಜ್ಞಾ ವಿಧಿ ಸ್ವೀಕಾರ

ಗದಗ,ಆ.21: ಧರ್ಮ ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆ ಮೂಡಿಸುವ ಸದ್ಭಾವನ ದಿನವನ್ನು ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಅವರು ಜಾತಿ,ಧರ್ಮ, ಮತ ಅಥವಾ ಭಾಷೆಯ ಬೇಧ ಭಾವವಿಲ್ಲದೇ ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯನಿರ್ವಹಿಸುವ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರವಿ ಗುಂಜಿಕರ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್.ನೀಲಗುಂದ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕ ರಡ್ಡೇರ, ಜಿ.ಪಂ ಉಪ ಕಾರ್ಯದರ್ಶಿ ಸಿ.ಆರ್.ಮುಡಂರಗಿ, ಜಿ.ಪಂ.ಮುಖ್ಯ ಲೆಕ್ಕಾಧಿಕಾರಿ ಜೆ.ಸಿ.ಪ್ರಶಾಂತ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.