ಪ್ರತಿಜ್ಞಾ ವಿಧಿ ಸ್ವೀಕಾರ

ಗದಗ, ನ.24: ರಾಷ್ಟ್ರದ ಸ್ವಾತಂತ್ರ ಹಾಗೂ ಐಕ್ಯತೆಯನ್ನು ಬಲಪಡಿಸಲು, ದೇಶದಲ್ಲಿ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವ ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು ಜಿಲ್ಲಾಡಳಿತ ಭವನದಲ್ಲಿಂದು ಆಚರಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ ಎಂ. ಅವರು ಮತ, ಭಾಷೆ, ಪ್ರದೇಶ ಅಥವಾ ಇತರ ರಾಜಕೀಯ, ಆರ್ಥಿಕ ಕುಂದು ಕೊರತೆಗಳ ಬಗೆಗಿನ ಭಿನಾಭಿಪ್ರಾಯ, ವಿವಾದಗಳನ್ನು ಶಾಂತಿಯುತವಾಗಿ ಹಾಗೂ ಸಂವಿಧಾನಾತ್ಮಕ ರೀತಿಯಲ್ಲಿ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ಪ್ರಯತ್ನ ಮುಂದುವರೆಸುವ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ತಹಶೀಲ್ದಾರ ಟಿ.ಸಿ.ಕಲಾಲ್ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.