ಪ್ರತಿದಿನ 5 ಲಕ್ಷ ಮಂದಿಗೆ ಲಸಿಕೆ

ಸೆಪ್ಟೆಂಬರ್ ತಿಂಗಳಿನಿಂದ ಪ್ರತಿದಿನ ಐದು ಲಕ್ಷ ಮಂದಿಗೆ ಕೋರೋನಾ ಲಸಿಕೆ ಹಾಕುವ ಉದ್ದೇಶ ಹೊಂದಲಾಗಿದ್ದು ಇದಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ ಪೂರೈಕೆ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ