ಪ್ರತಿಭಾನ್ವಿತರನ್ನು ಪ್ರೋತ್ಸಾಹಿಸಿ-ನಾರಾಣಸ್ವಾಮಿ

ವಿಜಯಪುರ, ನ.೧೭: ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಶಿಕ್ಷಣಕ್ಕೆ ಸಂಘಸಂಸ್ಥೆಗಳು ಪ್ರೋತ್ಸಾಹಿಸುವ ಮೂಲಕ ಶಿಕ್ಷಿತ ಉತ್ತಮ ಮಾನವಸಂಪನ್ಮೂಲವನ್ನು ಸೃಜಿಸಿಕೊಳ್ಳುವುದರಿಂದ ರಾಷ್ಟ್ರದ ಅಭಿವೃದ್ಧಿ ಸಾಧ್ಯವಿದೆ ಎಂದು ಶಾಸಕ ಡಾ.ಎಲ್.ಎನ್.ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.
ಹೋಬಳಿಯ ಚಂದೇನಹಳ್ಳಿ ಗ್ರಾಮದ ಪ್ರಗತಿಪರ ರೈತ ಮಂಜುನಾಥ್ ಅವರ ನಿವಾಸದಲ್ಲಿ ಆಲ್ ಇಂಡಿಯಾ ಮೆಡಿಕಲ್ ಸೈನ್ಸ್ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮಸ್ಥಾನ ಪಡೆದು ನಾಗಪುರದ ಏಮ್ಸ್‌ನಲ್ಲಿ ವೈದ್ಯಕೀಯ ಕೋರ್ಸ್‌ಗೆ ಆಯ್ಕೆಯಾಗಿರುವ ಪ್ರಜ್ವಲ್‌ಗೌಡ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು.
ತಾಲೂಕಿನಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಾಕಷ್ಟು ಆದ್ಯತೆ ನೀಡಿದ್ದು, ಆರ್ಥಿಕವಾಗಿ ಹಿಂದುಳಿದ, ಬಡ, ಹೆಣ್ಣುಮಕ್ಕಳ, ಅಂಗವಿಕಲ ಮಕ್ಕಳ ಗುಣಾತ್ಮಕ ಶಿಕ್ಷಣಕ್ಕೆ ಸಹಾಯ ನೀಡಿ ಪ್ರೋತ್ಸಾಹಿಸಲಾಗುತ್ತಿದೆ. ರೈತ ಕುಟುಂಬದ ಪ್ರಜ್ವಲ್‌ಗೌಡ ಅವರು ಆಲ್ ಇಂಡಿಯಾ ಮೆಡಿಕಲ್ ಸೈನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ೨೫೯೦ ನೇ ರ್‍ಯಾಂಕ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೇ ಪ್ರಥಮಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ.
ಪ್ರಜ್ವಲ್‌ಗೌಡ ಅವರ ಉನ್ನತ ಶಿಕ್ಷಣಕ್ಕೆ ಸದ್ಯ ೨೫ ಸಾವಿರ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದರು.
ಪೋಷಕರಾದ ಮಂಜುನಾಥ್, ಅಭಿನಂದನೆ ಸ್ವೀಕರಿಸಿದ ಪ್ರಜ್ವಲ್‌ಗೌಡ ಮಾತನಾಡಿದರು.
ತಾಲೂಕು ಜೆಡಿಎಸ್ ಕಾರ್ಯಾಧ್ಯಕ್ಷ ಕಾರಹಳ್ಳಿ ಆರ್.ಮುನೇಗೌಡ, ತಾಲೂಕು ಜೆಡಿಎಸ್ ಪ್ರಧಾನಕಾರ್ಯದರ್ಶಿ ಜಿ.ರವೀಂದ್ರ, ಹಾಪ್‌ಕಾಮ್ಸ್ ನಿರ್ದೇಶಕ ಹುರುಳುಗುರ್ಕಿ ಶ್ರೀನಿವಾಸ್, ಟೌನ್ ಜೆಡಿಎಸ್ ಅಧ್ಯಕ್ಷ ಎಸ್.ಭಾಸ್ಕರ್, ಹೋಬಳಿ ಜೆಡಿಎಸ್ ಕಾರ್ಯದರ್ಶಿ ಕಲ್ಯಾಣಕುಮಾರ್‌ಬಾಬು, ಎಂ.ಕೆಂಚೇಗೌಡ, ವಕೀಲ ರಾಮಾಂಜಿನಪ್ಪ, ಪುರ ಕೃಷ್ಣ, ಪ್ರಮೀಳಮ್ಮ, ಗ್ರಾಮಪಂಚಾಯಿತಿ ಸದಸ್ಯ ರವಿಕುಮಾರ್, ಗೋವಿಂದಪ್ಪ, ಆನಂದ್, ನಾರಾಯಣಸ್ವಾಮಿ, ಮತ್ತಿತರರು ಇದ್ದರು.
ಜಿಲ್ಲೆಯಲ್ಲಿಯೇ ನೀಟ್ ಪರೀಕ್ಷೆಯಲ್ಲಿ ಪ್ರಥಮಸ್ಥಾನ ಪಡೆದು, ನಾಗಪುರ ಏಮ್ಸ್‌ಗೆ ಆಯ್ಕೆಯಾಗಿರುವ ಪ್ರಜ್ವಲ್‌ಗೌಡ ಅವರನ್ನು ಗ್ರಾಮಪಂಚಾಯಿತಿ ಸದಸ್ಯರು ಸನ್ಮಾನಿಸಿದರು. ಶಾಸಕ ನಿಸರ್ಗನಾರಾಯಣಸ್ವಾಮಿ ಅವರು ೨೫ ಸಾವಿರ ರೂ. ಪ್ರೋತ್ಸಾಹಧನ ನೀಡಿ ಅಭಿನಂದಿಸಿದರು.