ಪ್ರತಿಭಾವಂತ ಮಕ್ಕಳಿಗೆ ಬಹುಮಾನ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಜೂ.19: ಸಂಜೀವರಾಯನಕೋಟೆ :ವಿದ್ಯಾರ್ಥಿಗಳು ಉತ್ತಮವಾಗಿ ಓದಿ ಹೆಚ್ಚು ಅಂಕ ಪಡೆಯುವುದರೊಂದಿಗೆ ಒಳ್ಳೆಯ ಗುಣಗಳನ್ನು ಮೈಗೂಡಿಸಿಕೊಂಡು ಬಾಳಬೇಕೆಂದು ಮುಖ್ಯ ಗುರುಗಳಾದ ರವಿಚೇಳ್ಳಗುರ್ಕಿ ಹೇಳಿದರು.
ತಾಲ್ಲೂಕಿನ ಸಂಜೀವರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ 2022-23ನೇ ಸಾಲಿನಲ್ಲಿ ಹೆಚ್ಚು ಅಂಕ ತಂದ ಪ್ರತಿಭಾವಂತ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಕೂಡ ವಿಶೇಷ ಪ್ರತಿಭೆ ಇರುತ್ತದೆ. ಅದು ಹೊರಬರಬೇಕಾದರೆ ಕಷ್ಟ ಪಟ್ಟು ಕಲಿಯಬೇಕು ಅದಕ್ಕೆ ಪೂರಕವಾಗಿ ಶಿಕ್ಷಕರು ಸೂಕ್ತ ಮಾರ್ಗದರ್ಶನ ಮಾಡಬೇಕೆಂದು ಹೇಳಿದರು.
ಶಿಕ್ಷಕರಾದ ಮುನಾವರ ಸುಲ್ತಾನ, ಬಸವರಾಜ, ಮೋದಿನ್ ಸಾಬ್, ದಿಲ್ಷಾದ್ ಬೇಗಂ, ಚನ್ನಮ್ಮ, ಸುಧಾ, ವೈಶಾಲಿ, ಶ್ವೇತಾ, ಉಮ್ಮೆಹಾನಿ, ಶಶಮ್ಮ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಮಹೇಶ ಉಪಸ್ಥಿತರಿದ್ದರು.