
ಕಲಬುರಗಿ:ಮೇ.18:ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 622 ಅಂಕ ಗಳಿಸಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದ ಚಿಂಚೋಳಿ ತಾಲ್ಲೂಕಿನ ಕೋಡ್ಲಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಪೂಜಾ ಅವರಿಗೆ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರು ಗುರುವಾರ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭಾ, ಪ್ರಿನ್ಸಿಪಾಲ್ ಡಾ. ರಾಜಶೇಖರ್ ಮಾಂಗ್, ವಾರ್ಡನ್ ಶಿವಕುಮಾರ್ ಹಿರೇಮಠ್, ಶಾಲೆಯ ಸಿಬ್ಬಂದಿಗಳಾದ ಮಹೇಶ್ ಎಸ್.ಜಿ., ಪಾಲಕರಾದ ರೇವಣಸಿದ್ದಪ್ಪ ಮುಂತಾದವರು ಉಪಸ್ಥಿತರಿದ್ದರು.