
ನರೇಗಲ್,ಸೆ.16:ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಬಹಳ ಪ್ರಮುಖವಾಗಿದೆ. ಮಕ್ಕಳು ಪಠ್ಯ ಚುಟುವಟಿಕೆಗಳ ಜತೆಗೆ ಪಠ್ಯೇತರ ಚಟುವಟಿಕೆಗಳ ಕಡೆಗೆ ಒಲವು ಮೂಡಿಸಲು ಪ್ರತಿಭಾ ಕಾಂರಜಿಯು ಉತ್ತಮ ವೇದಿಕೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎನ್ ಹುರುಳಿ ಹೇಳಿದರು.
ಸಮೀಪದ ಅಬ್ಬಿಗೇರಿ ಗ್ರಾಮದಲ್ಲಿ ಅಬ್ಬಿಗೇರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿಭಾ ಕಾರಂಜಿ ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷಿಯ ಕಾರ್ಯಕ್ರಮವಾಗಿದ್ದು, ಸಹಪಠ್ಯ ಚಟುವಟಿಕೆಗಳ ಮೂಲಕ ಜ್ಞಾನ ಬೆಳೆಸಿಕೊಳ್ಳಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ. ಈ ಕಾರ್ಯಕ್ರಮದಿಂದ ಮಕ್ಕಳಲ್ಲಿ ಯಾವ ಪ್ರತಿಭೆ ಅಡಗಿದೆಯೋ ಎಂದು ತಿಳಿಯುತ್ತದೆ. ಮಕ್ಕಳು ತಮ್ಮದೇ ಆಯ್ಕೆಯ ಕ್ಷೇತ್ರದಲ್ಲಿ ಮುಂದುವರೆಸುವ ಅವಕಾಶ ಸಿಗಬೇಕು. ವಿದ್ಯಾರ್ಥಿಗಳು ಓದಿನ ಜತೆಗೆ ಕಲೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಾಗ ಮಾತ್ರ ಪ್ರತಿಭಾವಂತರಾಗಲು ಸಾಧ್ಯ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಾಧಾನ ಕಾರ್ಯದರ್ಶಿ ಸಿ.ಕೆ ಕೇಸರಿ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸ, ಸುಂದರ ಸಾಂಸ್ಕೃತಿಕ ಹಿನ್ನೆಲೆ ಇರುವ ಭಾರತದಲ್ಲಿ ವಿಭಿನ್ನ ಸಂಸ್ಕೃತಿಕ ಕಾಣಬಹುದು. ಈ ವೈವಿದ್ಯಮಯ ಭಾರತದ ಹಲವು ಮುಖಗಳನ್ನು ಮಕ್ಕಳ ಪ್ರತಿಭಾ ಕಾರಂಜಿಯಲ್ಲಿ ಕಾಣಬಹುದು. ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಹೊರಹೊಮ್ಮಲು ಪ್ರತಿಭಾ ಕಾರಂಜಿ ವೇದಿಕೆ ಸಹಕಾರಿಯಾಗಲಿದೆ ಎಂದರು.
ಅಬ್ಬಿಗೇರಿ ಕ್ಲಸ್ಟರ್‍ನಲ್ಲಿ 18 ಸರ್ಕಾರಿ ಪ್ರಾಥಮಿಕ ಶಾಲೆ, 4 ಪ್ರೌಢಶಾಲೆಗಳಿದ್ದು, ಅದರಲ್ಲಿ ಒಟ್ಟು 108 ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ್ದರು. ಎಸ್‍ಡಿಎಂಸಿ ಅಧ್ಯಕ್ಷ ಶರಣಪ್ಪ ಮೂಲಿಮನಿ ಅಧ್ಯಕ್ಷತೆ ವಹಿಸಿದ್ದರು. ಬಸಮ್ಮ ತೆಗ್ಗಿನಕೇರಿ, ರೇಖಾ ವಿರಾಪುರ, ಬಸಪ್ಪ ಕಮ್ಮಾರ, ಸಿದ್ದು ಹರದಾರಿ, ಆನಂದ ಹಿರೇಮನಿ, ದುರ್ಗೇಶ ಬಂಡೆವಡ್ಡರ, ವಿಜಯಕುಮಾರ್ ನಾಯಕರ, ಅಕ್ಕಮ್ಮ ಡೊಳ್ಳಿನ, ಎಸ್.ಬಿ ಗವಿ, ಸಮೂಹ ಸಂಪನ್ಮೂಲ ವ್ಯಕ್ತಿ ಎಸ್.ಆರ್ ಮೂಲಿಮನಿ, ಆರ್.ಡಿ ರಂಗಣ್ಣನವರ, ಆರ್.ವಿ ಬೆಲ್ಲದ ಸೇರಿದಂತೆ ಎಲ್ಲ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.