ಪ್ರತಿಭಾ ವಿರುದ್ಧ ಮಾನಹಾನಿಕರ ಪೋಸ್ಟ್: ಆರೋಪಿಗೆ ನ್ಯಾ.ಸೆರೆ


ಮಂಗಳೂರು, ಅ.೨೯- ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕಾರಕ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೆ.ಆರ್. ಶೆಟ್ಟಿಗೆ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ಶುಕ್ರವಾರ ಆರೋಪಿಯನ್ನು ಮೂರನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.  ನ್ಯಾಯಾಲಯವು ಆರೋಪಿಗೆ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಕೆ.ಆರ್. ಶೆಟ್ಟಿ ಗುರುವಾರ ವಕೀಲರ ಮೂಲಕ ನ್ಯಾಯಾಲಯಕ್ಕೆ ಶರಣಾಗಿದ್ದ. ನ್ಯಾಯಾಲಯವು ಆರೋಪಿಯನ್ನು ಒಂದು ದಿನದ ಪೊಲೀಸ್ ಕಸ್ಟಡಿಗೆ ನೀಡಿತ್ತು. ಶುಕ್ರವಾರ ಪೊಲೀಸರು ಆರೋಪಿಯನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜಾಮೀನು ನಿರಾಕರಿಸಿ, ನ್ಯಾಯಾಂಗ ಬಂಧನ ವಿಧಿಸಿದೆ.