ಪ್ರತಿಯೊಬ್ಬರಿಗೂ ಲಸಿಕೆ ನೀಡಿ ಕರ್ನಾಟಕ ರಕ್ಷಿಸಿ

ದಾವಣಗೆರೆ,ಜೂ.10: ನಾಡಿನ ಪ್ರತಿಯೊಬ್ಬ ಪ್ರಜೆಗೂ ಸೆಪ್ಟೆಂಬರ್ ತಿಂಗಳೊಳಗೆ ಕೊರೊನಾ ಲಸಿಕೆ ನೀಡಿ, ಕರ್ನಾಟಕವನ್ನು ಕೋವಿಡ್ ಮೂರನೇ ಅಲೆಯಿಂದ ರಕ್ಷಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮತ್ತು ತಾಲ್ಲೂಕು ಘಟಕ ಹಾಗೂ ಗ್ರಾಮ ಶಾಖೆಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಆನ್‌ಲೈನ್ ಪ್ರತಿಭಟನೆ ನಡೆಸಿದರು.
ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ ಜನ್ಮ ದಿನವಾಗಿರುವ ಜೂ.10ರಂದು ಕರವೇ ಕಾರ್ಯಕರ್ತರು ಜಿಲ್ಲೆಯ 150ಕ್ಕೂ ಹೆಚ್ಚು ಕಡೆಯಲ್ಲಿ ಆನ್‌ಲೈನ್ ಮೂಲಕ ಜನಸಾಮಾನ್ಯರ ಜೀವ ರಕ್ಷಣೆಯ ಹಕ್ಕೊತ್ತಾಯಗಳಿಗಾಗಿ ‘ಪ್ರತಿಭಟನಾ ದಿನ’ ದಿನವನ್ನಾಗಿ ಆಚರಿಸಿದರು.
ಕೋವಿಡ್ ಎರಡನೇ ಅಲೆಯಲ್ಲಿ ಸರ್ಕಾರದ ಅಧಿಕೃತ ಅಂಕಿಅAಶಗಳ ಪ್ರಕಾರವೇ 30 ಸಾವಿರಕ್ಕೂ ಹೆಚ್ಚು ಸಾವು ಸಂಭವಿಸಿವೆ. ವಾಸ್ತವದಲ್ಲಿ ಕರೋನಾದಿಂದ ಮೃತ ಪಟ್ಟವರ ಸಂಖ್ಯೆ ಹಲವು ಪಟ್ಟು ಹೆಚ್ಚಾಗಿದೆ. ಹೀಗಾಗಿ, ತಂದೆ-ತಾಯಿ ಕಳೆದುಕೊಂಡು ಸಾವಿರಾರು ಮಕ್ಕಳು ಅನಾಥರಾಗಿದ್ದಾರೆ. ಇನ್ನೂ ಮೂರನೇ ಅಲೆಯು ಇದಕ್ಕಿಂತ ಹೆಚ್ಚಾಗಿ ಭಾದಿಸಲಿದೆ ಎಂಬ ಸುಳಿವನ್ನು ತಜ್ಞರು ನೀಡಿದ್ದಾರೆ. ಆದ್ದರಿಂದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಬೇಕೆಂದು ಆಗ್ರಹಿಸಿದರು
ಬಡವ-ಶ್ರೀಮಂತನೆAಬ ಭೇದವಿಲ್ಲದೆ ಉಚಿತವಾಗಿಯೇ ಎಲ್ಲರಿಗೂ ಲಸಿಕೆ ಕೊಡಬೇಕು. ಖಾಸಗಿ ಆಸ್ಪತ್ರೆ, ಸಂಸ್ಥೆಗಳಿಗೆ ನೀಡಿರುವ ಶೇ 25 ರಷ್ಟು ವ್ಯಾಕ್ಸಿನ್ ಕೊಳ್ಳುವ ಅನುಮತಿಯನ್ನು ರದ್ದುಗೊಳಿಸಬೇಕು. ಕೋವಿಡ್ ಮೂರನೇ ಅಲೆ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಬಹುದು ಎಂದು ತಜ್ಞರು ಅಭಿಪ್ರಾಯಪಡುತ್ತಿರುವುದರಿಂದ ಜೂನ್ ಅಂತ್ಯದೊಳಗೆ ಮೊದಲನೇ ಡೋಸ್ ನೀಡಬೇಕು. ಸೆಪ್ಟೆಂಬರ್ ಅಂತ್ಯದೊಳಗೆ ಎರಡನೇ ಡೋಸ್ ನೀಡಬೇಕೆಂದು ಒತ್ತಾಯಿಸಿದರು.
ಬೂತ್ ಮಟ್ಟದಲ್ಲಿ ಲಸಿಕಾ ಕೇಂದ್ರ ಸ್ಥಾಪಿಸಿ, ಲಸಿಕೆ ಪಡೆಯಲು ನೂಕುನುಗ್ಗಲು ತಪ್ಪಿಸಬೇಕು. ಸಾಧ್ಯವಾದರೆ ಮನೆಮನೆಗೂ ತೆರಳಿ ಲಸಿಕೆ ನೀಡುವಂಥ ವ್ಯವಸ್ಥೆ ಜಾರಿಗೊಳಿಸಬೇಕು. ಲಸಿಕೆ ನೀಡಿಕೆಗೆ ಸರ್ಕಾರ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಬೇಕೆಂದು ಮನವಿ ಮಾಡಿದರು.
ಕೇಂದ್ರ ಸರ್ಕಾರ ಆಕ್ಸಿಜನ್, ವೆಂಟಿಲೇಟರ್, ರೆಮ್ಡಿಸಿವಿರ್, ಆಂಫೋಟೆರಿಸಿನ್ ಬಿ ಇತ್ಯಾದಿಗಳ ಹಂಚಿಕೆ ಸಂದರ್ಭದಲ್ಲೂ ಕರ್ನಾಟಕದ ಪಾಲನ್ನು ಕಡಿಮೆ ಮಾಡಿ, ಗುಜರಾತ್ ಮತ್ತು ಉತ್ತರದ ರಾಜ್ಯಗಳಿಗೆ ಹೆಚ್ಚು ನೀಡಿದೆ. ಈ ತಾರತಮ್ಯವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಜೂನ್ 21ರಿಂದ ವೈಜ್ಞಾನಿಕವಾಗಿ, ಜನಸಂಖ್ಯೆ ಆಧರಿಸಿ ಹಂಚಿಕೆ ಮಾಡಬೇಕೆಂದು ಒತ್ತಾಯಿಸಿದರು.
ಆನ್‌ಲೈನ್ ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಎಂ.ಎಸ್.ರಾಮೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಬಸಮ್ಮ, ಮಂಜುಳ, ಶಾಂತ, ಶ್ರೀನಿವಾಸ್ ಸಂತೋಷ್, ಸತ್ಯನಾರಾಯಣ್ ಭಟ್, ರವಿಕುಮಾರ್, ಪ್ರದೀಪ್, ಹೊನ್ನಾಳ್ಳಿ ತಾಲ್ಲೂಕು ಅಧ್ಯಕ್ಷ ವಿನಯ್, ಜಗಳೂರು ತಾಲ್ಲೂಕು ಅಧ್ಯಕ್ಷ ಮಹಾಂತೇಶ್, ರೇಖಾ, ಶಂಭುಲಿAಗಪ್ಪ, ಶಾಯಿನಾ, ತಿಪ್ಪಮ್ಮ, ಹರಿಹರ ತಾಲ್ಲೂಕು ಅಧ್ಯಕ್ಷÀ ಬಾಲಸುಬ್ರಹ್ಮಣ್ಯ, ನಾಗರಾಜ್ ಮೆರ‍್ವಾಡೆ, ನಾಗರಾಜ್‌ಗೌಡ, ಸಂತೋಷ್, ಮುನ್ನಾ ಪೈಲ್ವಾನ್, ಹರ್ಷ, ಚನ್ನಗಿರಿಯ ಮಲ್ಲನಾಯಕ ಮತ್ತಿತರರು ಭಾಗವಹಿಸಿದ್ದರು.