ಪ್ರತಿಯೊಬ್ಬರು ಕಡ್ಡಾಯವಾಗಿ ಮತ ಚಲಾಯಿಸಿ : ಇ. ಒ ದೀಪಿಕಾ ಬಿ ನಾಯ್ಕರ

(ಸಂಜೆವಾಣಿ ವಾರ್ತೆ)
ಹುಮನಾಬಾದ :ಮೇ.8: ಮೇ 10 ರಂದು ನಡೆಯಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಸ್ವೀಪ್ ಸಮಿತಿ ಅಧಿಕಾರಿ ದೀಪಿಕಾ ಬಿ ನಾಯ್ಕರ ಹೇಳಿದರು .
ರವಿವಾರ ಪಟ್ಟಣದ ತಾಲೂಕು ಪಂಚಾಯತ್ ಆವರಣದಲ್ಲಿ ರಂಗೋಲಿ ಸ್ಪರ್ಧೆ ಹಾಗೂ ಮೇಣದ ಬತ್ತಿ ಬೆಳಗಿಸುವ ಮುಖಾಂತರ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಂಡು ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಅವರು,
ಸ್ವಯಂ ಪ್ರೇರಿತವಾಗಿ ಮತದಾನ ಮಾಡುವ ಮೂಲಕ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಿ, ಉತ್ತಮ ಸಮಾಜ ನಿರ್ಮಾಣ ಮಾಡಬೇಕು, ಇತ್ತೀಚಿನ ದಿನಗಳಲ್ಲಿ ವಿದ್ಯಾವಂತ ಮತದಾರರೇ ಮತದಾನ ಪ್ರಕ್ರಿಯೆಯಿಂದ ದೂರವಿರುವುದು ವಿಷಾಧನೀಯ ಸಂಗತಿಯಾಗಿದೆ ಹಾಗಾಗಿ ಭಾರತ ಸಂವಿಧಾನವು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಂಡು, ಮತದಾನ ಮಾಡುವುದು ಪ್ರತಿಯೊಬ್ಬ ಮತದಾರನ ಆದ್ಯ ಕರ್ತವ್ಯ. ಯಾವುದೇ ಕಾರಣಕ್ಕೆ ಮತದಾನದಿಂದ ದೂರ ಉಳಿಯಬಾರದು ಎಂದು ಹೇಳಿದರು.
ಚುನಾವಣೆ ಆಯೋಗ ಮತದಾನದ ಹಕ್ಕು ಸಮರ್ಪಕವಾಗಿ ಕಲ್ಪಿಸುವ ಉದ್ದೇಶದಿಂದ 80 ವರ್ಷ ಮೇಲ್ಪಟ್ಟವರಿಗೆ, ಅನಾರೋಗ್ಯ, ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡುವ ಒಂದು ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇದರ ಸದುಪಯೋಗವನ್ನು ಸಂಬಂಧಪಟ್ಟವರು ಪಡೆದುಕೊಂಡು
ಮತ ಚಲಾಯಿಸಬೇಕೆಂದು ಮಾಹಿತಿ ನೀಡಿದರು.
ಇತ್ತೀಚಿನ ದಿನ ಗಳಲ್ಲಿ ಕೇಂದ್ರ ಚುನಾವಣಾ ಆಯೋಗ ಸಾಕಷ್ಟು ಸುಧಾರಣೆಗಳನ್ನು ಕೈ???ಂಡಿದ್ದು, ಇದರಿಂದ ಮತದಾನ ಪ್ರಕ್ರಿಯೆ ಸುಲಲಿತವಾಗಿ ನಡೆದು, ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋ ಸ್ಕರ ರಚಿತವಾಗಿರುವ ಪ್ರಜಾಪ್ರಭುತ್ವದ ಮೌಲ್ಯ ಗಳನ್ನು ಎತ್ತಿಹಿಡಿಯುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವ ದೃಢ ನಿರ್ಧಾರವನ್ನು ಕೈಗೆuಟಿಜeಜಿiಟಿeಜಳ್ಳಬೇಕು ಎಂದರು.
ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ, ಜಗನ್ನಾಥ್ ಹಾಗೂ ಶಿವಲೀಲಾ, ತಾಲೂಕು ಪಂಚಾಯತ್ ಸಿಬ್ಬಂದಿಗಳಾದ ದಯಾನಂದ್ ಲಾಖೆ, ಮಲ್ಲಿಕಾರ್ಜುನ್ ಸಾಗರ್,ಪೂರ್ಣಿಮಾ,ಪಾರ್ವತಿ, ನಾಗೇಂದ್ರ, ಶಿವರಾಜ್ ಪಾಟೀಲ್, ಉಮೇಶ ಮಲಗಿ ಉಪಸ್ಥಿತರಿದ್ದರು