ಪ್ರತಿಯೊಬ್ಬರು ತಮ್ಮ ಮತದಾನದ ಹಕ್ಕು ಚಲಾಯಿಸಿ : ಕಡಕಬಾವಿ

ಅಥಣಿ :ಎ.12: ಯುವ ಮತದಾರರು ಸೇರಿದಂತೆ ಮತದಾನ ಹಕ್ಕು ಹೊಂದಿದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಇಚ್ಛೆಯ ಸರ್ಕಾರವನ್ನು ಆಯ್ಕೆ ಮಾಡಬೇಕು ಎಂದು ತಾಲೂಕು ತಹಶೀಲ್ದಾರ ಬಿ.ಎಸ್.ಕಡಕಬಾವಿ ಹೇಳಿದರು.
ಅವರು ಪಟ್ಟಣದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಕ್ಯಾಂಡಲ್ ಬೆಳಗಿಸುವುದರ ಮೂಲಕ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಮತ ನಮ್ಮ ಹಕ್ಕು. ಮತದಾನ ಹಕ್ಕನ್ನು ಆಮಿಷಗಳಿಗೆ ಒಳಗಾಗಿ ಮಾರಿಕೊಳ್ಳದೇ ಸಮರ್ಥ ವ್ಯಕ್ತಿಗಳಿಗೆ ಮತ ನೀಡುವ ಮೂಲಕ ನಿಮ್ಮ ಇಚ್ಛೆಯ ಸರ್ಕಾರವನ್ನು ರಚನೆ ಮಾಡಿಕೊಳ್ಳಬೇಕು ಎಂದರು. ತಾಲೂಕು ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ವಾಲಿ ಮಾತನಾಡಿ, ಮತದಾನ ಹಕ್ಕಿನಿಂದ ಯಾರೂ ವಂಚಿತವಾಗಬಾರದು. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಹೆಚ್ಚಿನ ಮತದಾನಕ್ಕೆ ಸಹಕರಿಸಬೇಕು ಎಂದು ಕೋರಿದರು. ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕ್ಯಾಂಡಲ್ ಜಾಥಾ ಮೂಲಕ ಪಟ್ಟಣದ ಪ್ರಮುಖ ಬಿದಿಗಳಲ್ಲಿ ಸಂಚರಿಸಿ ನನ್ನ ಮತ ಮಾರಾಟಕಿಲ್ಲ, ಮತದಾನದಿಂದ ವಂಚಿತರಾಗಬೇಡಿ. ನಮ್ಮ ಮತ ನಮ್ಮ ಹಕ್ಕು, ಆಮಿಷಕ್ಕೆ ಮರುಳಾಗದಿರಿ ಯೋಚಿಸಿ ಮತ ಚಲಾಯಿಸಿ, ಪ್ರತಿ ಮತವು ಅಮೂಲ್ಯ ತಪ್ಪದೇ ಮತ ಚಲಾಯಿಸಿ ಎಂದು ಮತಜಾಗೃತಿ ಘೋಷಣೆಗಳನ್ನು ಕೂಗುವುದರ ಮೂಲಕ ಮತ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಎಂ.ಆರ್.ಕೊತ್ವಾಲ, ಉದಯಗೌಡ ಪಾಟೀಲ, ನಾಗರಾಜ ಕಾಂಬಳೆ, ಉಮೇಶ ಪೆÇೀಳ, ಶೈಲಶ್ರೀ ಬರಬರೆ ಹಾಗೂ ತಾಪಂ ಕಚೇರಿಯ ಸಿಬ್ಬಂದಿ ಹಾಗೂ ಪುರಸಭೆ ಸಿಬ್ಬಂದಿ ಮತದಾನ ಜಾಗೃತಿ ಜಾಥಾದಲ್ಲಿ ಪಾಲ್ಗೊ0ಡಿದ್ದರು.