ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಪರಿಸರವನ್ನು ಉಳಿಸಿ: ರಂಗಸ್ವಾಮಿ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಜೂ.06-ಚಾಮರಾಜನಗರ ತಾಲೂಕಿನ ಯಾನಗಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬುಧವಾರ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಟ್ಟು ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಎಸ್‍ಡಿಎಂಸಿ ಅಧ್ಯಕ್ಷ ರಂಗಸ್ವಾಮಿ ಮಾತನಾಡಿ, ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಪರಿಸರವನ್ನು ಉಳಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಷರೀಪ್, ಮುಖ್ಯ ಶಿಕ್ಷಕ ಸಿ. ಎಸ್. ಮಹದೇವ ಸ್ವಾಮಿ, ಸಹ ಶಿಕ್ಷಕರಾದ ಮಹೇಶ್, ಸದಾಶಿವ ಮೂರ್ತಿ, ಶಿವಲಿಂಗಪ್ಪ, ಮಹದೇವ ಸ್ವಾಮಿ, ಚಂದು ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಹಾಗೂ ಅಡುಗೆ ಸಿಬ್ಬಂದಿಯವರಿದ್ದರು.