ಪ್ರತಿಯೊಬ್ಬರೂ ಮಾಸ್ಕ್ ಧರಿಸಿ

ಗಂಗಾವತಿ, ನ.12 : ನಗರದ ಜುಲೈ ನಗರದಲ್ಲಿ ಬುಧವಾರ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಕರೋನ ವೈರಸ್ ಕುರಿತು ಸಾರ್ವಜನಿಕರಿಗೆ ಜಾಗ್ರತೆ ಮೂಡಿಸಲಾಯಿತು.
ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಪುಂಡಲಿಂಗಪ್ಪ ಅವರು ಮಾತನಾಡಿ, ದೇಶಾದ್ಯಂತ ಕೋವಿಡ್- 19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತದೆ. ಹೀಗಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರು
ಹೊರಗಡೆಗೆ ಬರುವಾಗ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮನೆಯಲ್ಲಿ ಸ್ಯಾನಿಟೈಜರ್ ಬಳಸಬೇಕು. ಸರ್ಕಾರದ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ, ಸಾರ್ವಜನಿಕರು ಸೇರಿ ಇತರರಿದ್ದರು.