ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಿಗಳು ಕಡ್ಡಾಯವಾಗಿಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣ ಪಡೆಯಲು ಸೂಚನೆ

ಕಲಬುರಗಿ.ಜು.01:ಕಲಬುರಗಿ ನಗರ ವ್ಯಾಪ್ತಿಯ ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಿಗಳು ಕಡ್ಡಾಯವಾಗಿ ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣ ಪಡೆಯಬೇಕು. ಒಂದು ವೇಳೆ ಬೀದಿ ಬದಿ ವ್ಯಾಪಾರÀಸ್ಥರು ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣ ಪತ್ರ ಪಡೆಯದೇ ಇದ್ದಲ್ಲಿ ಕರ್ನಾಟಕ ಬೀದಿ ವ್ಯಾಪಾರಿಗಳ ಕಾಯ್ದೆಯಡಿ ವ್ಯಾಪಾರ ಮಾಡಲು ಅವಕಾಶವಿರುವುದಿಲ್ಲ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಮಹಾನಗರಪಾಲಿಕೆಯ ಡೇ-ನಲ್ಮ್ ಯೋಜನೆಯ ಬೀದಿಬದಿ ವ್ಯಾಪಾರಿಗಳ ಬೆಂಬಲ ಉಪ-ಘಟಕದಡಿ ನಗರದಲ್ಲಿ ಬೀದಿ ಬದಿ ವ್ಯಾಪಾರದಲ್ಲಿ ತೊಡಗಿರುವ ಬೀದಿ ವ್ಯಾಪಾರಿಗಳು ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಮಾರಾಟ ಪ್ರಮಾಣಪತ್ರ ಮತ್ತು ಗುರುತಿನ ಚೀಟಿ ಹೊಂದದೇ ಇರುವ ಬೀದಿ ವ್ಯಾಪಾರಿಗಳು ಕಡ್ಡಾಯವಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು.

ನಗರ ವ್ಯಾಪ್ತಿಯಲ್ಲಿ ವ್ಯಾಪಾರ ನಡೆಸುತ್ತಿರುವ ಬೀದಿ ವ್ಯಾಪಾರಿಗಳು ಕಲಬುರಗಿ ಮಹಾನಗರ ಪಾಲಿಕೆಯ ಡೇ-ನಲ್ಮ್ ಶಾಖೆಯ ಕೋಣೆ ಸಂಖ್ಯೆ 47ಕ್ಕೆ ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆ ಪಡೆದು ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಸದರಿ ಪ್ರಕ್ರಿಯೆಯು ಒಂದು ತಿಂಗಳೊಳಗಾಗಿ ಪೂರ್ಣಗೊಳಿಸಬೇಕಾಗಿದೆ. ಆದ್ದರಿಂದ ಬೀದಿ ಬದಿ ವ್ಯಾಪಾರಿಗಳು ಆದಷ್ಟು ಶೀಘ್ರದಲ್ಲಿ ಹೆಸರನ್ನು ನೋಂದಾಯಿಸಿಕೊಂಡು ಸದರಿ ಕಾರ್ಯಾಲಯದಿಂದ ಗುರುತಿನ ಚೀಟಿಯನ್ನು ಪಡೆದು ಪ್ರಧಾನಮಂತ್ರಿ ಸ್ವನಿಧಿ ಪೋರ್ಟಲ್ (PMSVANidhi Portal) ಮುಖಾಂತರ ಸಾಲಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಅದೇ ರೀತಿ ಪ್ರಧಾನಮಂತ್ರಿ ಆತ್ಮ ನಿರ್ಭರ ನಿಧಿ ಅಡಿಯಲ್ಲಿ ಬೀದಿ ವ್ಯಾಪಾರಕ್ಕಾಗಿ ಸಾಲ ಪಡೆದ ಬೀದಿ ವ್ಯಾಪಾರಿಗಳ ಕುಟುಂಬದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯವು ಡೇ-ನಲ್ಮ್ ಶಾಖೆಯಿಂದ ಕೈಗೊಂಡಿರುವುದರಿಂದ ಈಗಾಗಲೇ ಬೀದಿ ಬದಿ ವ್ಯಾಪಾರಿಗಳು ಸೌಲಭ್ಯ ಪಡೆದ ಎಲ್ಲಾ ಬೀದಿ ವ್ಯಾಪಾರಿಗಳು ಸಮೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಂಡು ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.