ಪ್ರತಿಯೊಬ್ಬ ಮಹಿಳೆಗೂ ಕಾನೂನಿನ ಬಗ್ಗೆ ತಿಳುವಳಿಕೆ ಇರಲಿ

ಸಿರವಾರ,ಜು.೦೮-
ಆರ್ಥಿಕ ಬಡತನಕ್ಕೆ ಪ್ರಮುಖ ಕಾರಣ ಶೈಕ್ಷಣಿಕವಾಗಿ ಹಿಂದುಳಿದಿರುವುದು. ಮಹಿಳೆಯರು ಜಾಗೃತರಾಗಿ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಶ್ರಮ ವಹಿಸಬೇಕು. ಆ ಮೂಲಕ ಕಾನೂನಿನ ಅರಿವಿನೊಂದಿಗೆ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ. ಆಗ ನಮ್ಮ ಸಮಾಜವೂ ಅಭಿವೃದ್ಧಿಯಾಗುತ್ತದೆ ಎಂದು ಸಿಪಿಐ ಶಶಿಕಾಂತ್ ಎಂ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ನಡೆದ ಮಹಿಳಾ ಜಾಗೃತಿ ಸಭೆಯಲ್ಲಿ ಮಾತನಾಡಿದರು.
ಕಾನೂನಿನ ಅರಿವು ಇಲ್ಲದಿರುವುದರಿಂದ ಮನೆ ಹಾಗೂ ಸಮಾಜ ಅವನತಿಯತ್ತ ಸಾಗುತ್ತದೆ. ಕಾನೂನಿನ ಅರಿವು ಎಲ್ಲರಿಗೂ ಬಹಳ ಅಗತ್ಯವಾಗಿದೆ. ಮಹಿಳಾ ದೌರ್ಜನ್ಯ ತಡೆ ಕಾಯಿದೆ ಹಾಗೂ ಇನ್ನಿತರ ಕಾನೂನಿನ ಬಳಕೆಯ ಕುರಿತು ಹಾಗೂ ದುರುಪಯೋಗವಾಗದಂತೆ ಎಚ್ಚರ ವಹಿಸುವ ಕುರಿತು ಮಾಹಿತಿ ನೀಡಿದರು.
ಸಭೆಯ ಯ ಬಗ್ಗೆ ಹೆಚ್ಚಿನ ಪ್ರಚಾರ ಮಾಡಿದ್ದರೆ, ಅಂಗನವಾಡಿ, ಆಶಾ ಕಾರ್ಯಕರ್ತೆಯರಷ್ಟೇ ಅಲ್ಲದೇ, ನೆರವು ಅಗತ್ಯವಿರುವ ಬಡ- ನೊಂದ ಮಹಿಳೆಯರು ಭಾಗವಹಿಸುತ್ತಿದ್ದರು ಎಂಬುದು ಉಲ್ಲೇಖನೀಯ.
ಈ ವೇಳೆ ಪಿಎಸ್‌ಐ ಅವಿನಾಶ್ ಕಾಂಬ್ಳೆ, ಹಾಗು ಠಾಣೆಯ ಪೊಲೀಸ್ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆ ಯರು, ಮಹಿಳೆಯರು ಇದ್ದರು.