ಪ್ರತಿ‌ದಿನ ಪ್ರಜಾಪ್ರಭುತ್ವ ಬಗ್ಗೆ ಪಾಠ ರಾಹುಲ್ ವಿರುದ್ದ ಪ್ರಧಾನಿ ವಾಗ್ದಾಳಿ

ನವದೆಹಲಿ, ಡಿ.26-” ಪ್ರತಿದಿನ ಕೆಲ ಜನರು ದೆಹಲಿಯಲ್ಲಿ ನನಗೆ ಪ್ರಜಾಪ್ರಭುತ್ವದ ಬಗ್ಗೆ ಪಾಠ ಮಾಡಲು ಬಯಸುತ್ತಾರೆ”…

ಹೀಗಂತ ಪ್ರಧಾನಿ ನರೇಂದ್ರ ಮೋದಿ ಹೇಳುವ ಮೂಲಕ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.

ರೈತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಅದನ್ನ ಹಿಂಪಡೆಯುವಂತೆ ಒತ್ತಾಯಿಸಿ ಎರಡು ಕೋಟಿಗೂ ಅಧಿಕ ಸಂಗ್ರಹವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ದೇಶದಲ್ಲಿ ಪ್ರಜಾಪ್ರಭುತ್ವ ಇಲ್ಲ. ಪ್ರಧಾನಿ ವಿರುದ್ಧ ಇಲ್ಲವೆ ಕೇಂದ್ರ ಸರ್ಕಾರದ ವಿರುದ್ದ ಮಾತನಾಡುವವರಿಗೆ ಭಯೋತ್ಪಾದಕ ಪಟ್ಟ ಕಟ್ಟುತ್ತಾರೆ ಎಂದು ಆರೋಪಿಸಿದ್ದರು.

ಈ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿ ಕೆಲ ನಾಯಕರು ನನಗೆ ಪ್ರಜಾಪ್ರಭುತ್ವದ ಬಗ್ಗೆ ಪಾಠ ಮಾಡುವ ಪ್ರಯತ್ನ ಮಾಡುತ್ತಾರೆ ಪ್ರಜಾಪ್ರಭುತ್ವವೆಂದರೆ ಏನು ಎನ್ನುವುದನ್ನು ಅದೇ ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿಗೆ ನಡೆದ ಜಿಲ್ಲಾ ಕಮಿಟಿ ಚುನಾವಣೆ ತೋರಿಸಿಕೊಟ್ಟಿದೆ ಎಂದು ರಾಹುಲ್ ಗಾಂಧಿ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.

ನಕಲಿ ಪ್ರಜಾಪ್ರಭುತ್ವ ಪ್ರತಿಪಾದಿಸುವ ಕೆಲ ನಾಯಕರು ತಮಗೆ ಪ್ರಜಾಪ್ರಭುತ್ವದ ಮಾಡಲು ಬರುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರಜಾಪ್ರಭುತ್ವದ ಪಾಠ ಮಾಡಲು ಬಯಸುವ ನಾಯಕರಿಗೆ ಜಮ್ಮು-ಕಾಶ್ಮೀರದಲ್ಲಿ ಜನತೆ ಪ್ರಜಾಪ್ರಭುತ್ವ ಎಂದರೇನು ಎನ್ನುವುದನ್ನು ಚುನಾವಣೆಯಲ್ಲಿ ತೋರಿಸಿಕೊಟ್ಟಿದ್ದಾರೆ ಎಂದು ತಿರುಗೇಟು ನೀಡಿದರು.

ಪ್ರಜಾಪ್ರಭುತ್ವವನ್ನು ಬಲಗೊಳಿಸುವ ನಿಟ್ಟಿನಲ್ಲಿ ಚುನಾವಣೆಯಲ್ಲಿ ಮತ ಚಲಾಯಿಸಿದ ಎಲ್ಲ ನಾಗರಿಕರಿಗೆ ತಾವು ಕೃತಜ್ಞತೆ ಮತ್ತು ಅಭಿನಂದನೆ ಸಲ್ಲಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ