ಪ್ರತಿ ಮನೆಗಳಲ್ಲಿ ರಾಷ್ಟ್ರ ಧ್ವಜ ಹಾರಿಸಲು ಡಿಸಿ ಸೂಚನೆ

೭೫ನೇ ಅಮೃತ ಸ್ವಾತಂತ್ರ ಮಹೋತ್ಸವ ಪೂರ್ವಭಾವಿ ಸಭೆ
ರಾಯಚೂರು, ಜುಲೈ, ೨೯, ಅಮೃತ ಸ್ವಾತಂತ್ರ ಮಹೋತ್ಸವ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರಿಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಮೃತ ಸ್ವಾತಂತ್ರ ಮಹೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ, ಅವರು ಈ ವರ್ಷ ಆ.೧೫ ರ ೭೫ನೇ ಸ್ವಾತಂತ್ರ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಅದ್ದೂರಿ ಆಚರಣೆ ಮಾಡಲಾಗುತ್ತಿದೆ ಎಂದರು. ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಕಡ್ಡಾಯವಾಗಿ ದ್ವಜಾರೋಹಣ ಮಾಡಬೇಕು ಹಳೇ ದ್ವಜಾರೋಹಣ ಮಾಡದೇ ಹೊಸ ದ್ವಜವನ್ನು ಹರಿಸಬೇಕು ಎಂದು ಸೂಚನೆ ನೀಡಿದರು.
ದರವಾಜ್, ಕಾಟಿ ದರವಾಜ್, ತೀನ್ ಖಂದಿಲ್, ಕಲ್ಲಾನೆಗಳ ಮೇಲೆ ದೀಪಾಲಂಕಾರ ಮತ್ತು ಡಿ.ಆರ್. ಪೊಲೀಸ್ ಮೈದಾನ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸಿ.ಸಿ. ಟಿವಿ ಕಣ್ಣಾವಲು ವ್ಯವಸ್ಥೆ ಮಾಡುವಂತೆ ನಗರಸಭೆ ಆಯುಕ್ತರಿಗೆ ಸೂಚಿಸಿದರು.
ಸ್ವಾತಂತ್ರೋತ್ಸವದ ೭೫ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಹರ್ ಘರ್ ತಿರಂಗ ಅಭಿಯಾನವನ್ನು ಆ.೧೩ ರಿಂದ I೫ ರ ವರೆಗೆ ನಡೆಸಲಾಗುತ್ತಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ ೮ ಜನ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ
ಆ.೧೩ ರಿಂದ ೧೫ ರವರೆಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಪ್ರತಿಯೊಂದು ಗ್ರಾಮದ ಎಲ್ಲಾ ಮನೆಯ ಮೇಲೆ ಮತ್ತು ಸರ್ಕಾರಿ ಕಛೇರಿ, ಖಾಸಗಿ ಕಚೇರಿ ಹಾಗೂ ಚಲನಚಿತ್ರ ಮಂದಿರಗಳಲ್ಲಿ ರಾಷ್ಟ್ರಧ್ವಜ ಹಾರಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದು ಹರ್ ಘರ್ ತಿರಂಗ ಮುಖ್ಯ ಉದ್ದೇಶವಾಗಿದೆ ಎಂದರು.
ಈ ಸಂದರ್ಭದಲ್ಲಿ ಅಪಾರ ಜಿಲ್ಲಾಧಿಕಾರಿ ಡಾ. ದುರುಗೇಶ್ ಕೆ. ಆರ್, ಎಸ್ಪಿ ನಿಖಿಲ್, ಸ್ವಾತಂತ್ರ ಹೋರಾಟಗಾರ ಡಿ. ಪಂಪಣ್ಣ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯ ನಿರ್ದೇಶಕಕಿ ನಾಯಕ್, ಬಸವರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ವೃಷಬೆಂದ್ರ, ತಹಶೀಲ್ದಾರ್ ನಗರಸಭೆ ಶಕೀಲ್, ಸೇರಿದಂತೆ ಉಪಸ್ಥಿತರಿದ್ದರು.