ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ರಾರಾಜಿಸಲಿ: ರಘುಕುಮಾರ್

ಮೈಸೂರು: ಆ.03:- ಶಾಲಾ ಮಕ್ಕಳಿಗೆ ರಾಷ್ಟ್ರ ಧ್ವಜದ ಮಹತ್ವವನ್ನು ಹಾಗೂ ರಾಷ್ಟ್ರಧ್ವಜವನ್ನು ತಯಾರಿಸುವ ವಿಧಾನಗಳನ್ನು ಕುರಿತ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯುವ ಭಾರತ್ ಸಂಘಟನೆ ವತಿಯಿಂದ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಸ್ವಾತಂತ್ರ್ಯ ಅಮೃತಾ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಹಾಗೂ ರಾಷ್ಟ್ರ ಧ್ವಜದ ಮಹತ್ವವನ್ನು ಹಾಗೂ ರಾಷ್ಟ್ರಧ್ವಜವನ್ನು ಹಾರಿಸುವ ವಿಧಾನಗಳನ್ನು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ನಂತರ ಮಾತನಾಡಿದ ಹಿರಿಯ ಸಮಾಜ ಸೇವಕರದ ಕೆ.ರಘುರಾಂ ವಾಜಪೇಯಿ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಗೆ ಗೌರವ ನೀಡುವುದನ್ನು ವಿದ್ಯಾರ್ಥಿಗಳು ಕಲಿಯಬೇಕು ಜನನಿ ಮತ್ತು ಜನ್ಮಭೂಮಿ ಸ್ವರ್ಗಕ್ಕಿಂತ ಮಿಗಿಲಾಗಿದ್ದು ಅದನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು ದೇಶ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಗೆ ಅಗೌರವ ತೋರಬಾರದು.ನಮ್ಮ ಯುವಜನತೆ ದೇಶಭಕ್ತಿ ಮತ್ತು ರಾಷ್ಟ್ರ ಪ್ರೇಮವನ್ನು ಮೈಗೂಡಿಸಿಕೊಂಡು ಸಮರ್ಪಣೆ ಮನೋಭಾವದಿಂದ ದುಡಿದರೆ ಮಾತ್ರ ದೇಶ ಅಭಿವೃದ್ಧಿಯಾಗುವುದು ಎಂದು ಹೇಳಿದರು
ನಂತರ ಮಾತನಾಡಿದ ಭೂಸೇನೆ ಯಜ್ಯೂನಿಯರ್ ಕಮಿಷನರ್ ಅಧಿಕಾರಿ ರಘುಕುಮಾರ್ ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ರಾರಾಜಿಸಲಿ' ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಆಗಸ್ಟ್ 13ರಿಂದ 15ರವರೆಗೆ ಪ್ರತಿಯೊಬ್ಬರೂ ತಮ್ಮ ಮನೆ ಮೇಲೆ ರಾಷ್ಟ್ರಧ್ವಜ ಪ್ರದರ್ಶಿಸಬೇಕು ಭಾರತ ಸ್ವಾತಂತ್ರಯದ ಅಮೃತ ಮಹೋತ್ಸವದ ಹೊಸ್ತಿಲಲ್ಲಿದೆ. ಈ ಸಂಭ್ರಮದಲ್ಲಿ ಹರ್ ಘರ್ ತಿರಂಗಾ ಧ್ಯೇಯವಾಕ್ಯದೊಂದಿಗೆ ಎಲ್ಲರೂ ರಾಷ್ಟ್ರ ಧ್ವಜ ಪ್ರದರ್ಶಿಸುವ ಮೂಲಕ ದೇಶಪ್ರೇಮ ಮೆರೆಯಬೇಕು. ಜತೆಗೆ ಯುವ ಪೀಳಿಗೆಗೆ ಸ್ವಾತಂತ್ರಯ ಸಂಗ್ರಾಮ ಹೋರಾಟದ ಕತೆ ತಿಳಿಸುವ ಕಾರ್ಯವಾಗಬೇಕು ಎಂದರು. ಅಮೃತ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಎಲ್ಲರೂ ಆಗಸ್ಟ್ 13-15ರ ನಡುವೆ ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ 'ಹರ್ ಘರ ತಿರಂಗಾ ಆಂದೋಲನವನ್ನು ಬಲಪಡಿಸಬೇಕು ಎಂದರು.
ಮೈಸೂರು ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಜೋಗಿ ಮಂಜು ಮಾತನಾಡಿ ಅಸಂಖ್ಯಾತ, ತ್ಯಾಗ, ಬಲಿದಾನ ಮತ್ತು ಹೋರಾಟಗಳ ಫಲವಾಗಿ ದಾಸ್ಯದ ಸಂಕೋಲೆಯಿಂದ ಭಾರತವು ಸ್ವಾತಂತ್ರಯಗೊಂಡು ಈಗ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮಕ್ಕೆ ಮಹನೀಯರ ತ್ಯಾಗ, ಬಲಿದಾನ ಮತ್ತು ಹೋರಾಟಗಳನ್ನು ಸ್ಮರಿಸುವ ಜತೆಗೆ ಎಲ್ಲರಲ್ಲಿ ದೇಶಪ್ರೇಮ ಜಾಗೃತಗೊಳಿಸಲು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಭಿಯಾನ ರೂಪಿಸಿದ್ದಾರೆ ಎಂದಿದ್ದಾರೆ.
ಭೂಸೇನೆ ಯ ಜ್ಯೂನಿಯರ್ ಕಮಿಷನ್ಡ್ ಅಧಿಕಾರಿ ರಘುಕುಮಾರ್ ಹಾಗೂ ಪ್ರಕಾಶ್ ಎಂ.ಪಿ, ಹಿರಿಯ ಸಮಾಜ ಸೇವಕರಾದ ಕೆ ರಘುರಾಂ ವಾಜಪೇಯಿ, ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷ ಜೋಗಿ ಮಂಜು, ಅಕ್ಕನ ಬಳಗ, ಶಾಲೆಯ ಮುಖ್ಯೋಪಾಧ್ಯಾಯಿನಿ ಸುಗುಣವತಿ, ಸುರೇಶ್ ಗೋಲ್ಡ್, ಸುಚೇಂದ್ರ ಹಾಗೂ ಇನ್ನಿತರರು ಹಾಜರಿದ್ದರು.