ಪ್ರತಿ ಮೂರು ತಿಂಗಳಿಗೊಮ್ಮೆ ರಸ್ತೆ ಸುರಕ್ಷತೆ ಕುರಿತು ಸಭೆ

ಚಿತ್ರದುರ್ಗ.ಜ.12:ಜಿಲ್ಲೆಯಲ್ಲಿ ಗುರುತಿಸಿರುವ ಅಪಘಾತ ಸ್ಥಳ ಹಾಗೂ ವಲಯಗಳ ಕುರಿತು, ಅಲ್ಲಿ ಸಂಭವಿಸುವ ಅಪಘಾತಗಳಿಗೆ ಕಾರಣ ಏನು ಎಂದು ಚರ್ಚಿಸಿ, ವೈಜ್ಞಾನಿಕವಾಗಿ ಪರಿಹಾರ ಕಂಡುಕೊಳ್ಳುವ ಅವಶ್ಯಕತೆ ಇದೆ. ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಭೆಗಳನ್ನು ನಡೆಸಬೇಕು. ಸಭೆಗಳಲ್ಲಿ ಸಾರ್ವಜನಿಕರು ಗಮನಕ್ಕೆ ತರುವ ದೂರುಗಳಿಗೆ ಎರಡು ತಿಂಗಳಲ್ಲಿ ಪರಿಹಾರ ಒದಗಿಸುವ ಕಾರ್ಯ ಮಾಡಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಹಾಗೂ ಜಿಲ್ಲಾ ಪೆÇಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.ಕೇಂದ್ರ ಸಾರಿಗೆ ಸಚಿವ ನಿತನ್ ಗಡ್ಕರಿ  ವಿಶೇಷವಾಗಿ ಪತ್ರ ಬರೆದು ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ಲೋಕಸಭಾ ಸದಸ್ಯರ ಪಾತ್ರ ಹೆಚ್ಚಿದೆ. ಸ್ಥಳೀಯ ಸಮಸ್ಯೆಗಳ ಕುರಿತು ಸಪ್ತಾಹದಲ್ಲಿ ಚರ್ಚಿಸುವಂತೆ ತಿಳಿಸಿದ್ದಾರೆ. ಜಿಲ್ಲಾಡಳಿತ ರಸ್ತೆ ಸುರಕ್ಷತೆಯ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಜಿಲ್ಲೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಮರಣ ಹೊಂದಿದವರಿಗಿಂತ, ಅಪಘಾತಗಳಲ್ಲಿ ಮರಣ ಹೊಂದುತ್ತಿರುವವರ ಸಂಖ್ಯೆ ಹೆಚ್ಚಿರುವುದು ವಿμÁದನೀಯ. ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಪೆÇಲೀಸ್ ವರಿಷ್ಠಾಧಿಕಾರಿಗಳು ನೀಡಿರುವ ವರದಿಯನ್ನು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಅಗತ್ಯ ಇರುವ ಕಡೆ ಲೋಹದ ಬ್ಯಾರಿಕೇಡ್ ನಿರ್ಮಾಣ, ಸಂಚಾರಿ ದೀಪಗಳ ಅಳವಡಿಕೆ, ಬಸ್ ನಿಲ್ದಾಣ, ಹೆದ್ದಾರಿಗಳಲ್ಲಿ ವಿದ್ಯುತ್ ದೀಪ ಅಳವಡಿಕೆ ಕಾರ್ಯಕೈಗೊಳ್ಳಬೇಕು. ನಗರದಲ್ಲಿ ಪುಟ್ ಪಾತ್ ನಿರ್ಮಾಣ , ಪಾಕಿರ್ಂಗ್ ವ್ಯವಸ್ಥೆ ಮಾಡಬೇಕು. ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವೈಜ್ಞಾನಿಕ ಡಿವೈಡರ್ ತೆರವಿಗೆ ಸಮೀಕ್ಷೆ: ಸಭೆಯಲ್ಲಿ ಸಾರ್ವಜನಿಕರು ನಗರದಲ್ಲಿ ನಿರ್ಮಿಸಿರುವ ಡಿವೈಡರ್‍ಗಳಿಂದ ಉಂಟಾಗುತ್ತಿರುವ ತೊಂದರೆ ಅಪಘಾತಗಳ ಕುರಿತು ಸಚಿವರ ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಕೇಂದ್ರ ಸಚಿವ ನಾರಾಯಣ ಸ್ವಾಮಿ ಡಿವೈಡರ್ ಕುರಿತು ಸಮೀಕ್ಷೆ ಕೈಗೊಳ್ಳಲಾಗುವುದು. ಸಮೀಕ್ಷಾ ವರದಿಯಲ್ಲಿ ಅವೈಜ್ಞಾನಿಕವಾಗಿ ಡಿವೈಡರ್ ನಿರ್ಮಿಸಿರುವುದು ಕಂಡು ಬಂದರೆ ತೆರವು ಮಾಡಲಾಗುವುದು ಎಂದು ಹೇಳಿದರು.