ಪ್ರತ್ಯೇಕ ಅಪಘಾತ: ಇಬ್ಬರ ಸಾವು


ಬೆಂಗಳೂರು,ಸೆ.೨೬-ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಿನ್ನೆ ಮಧ್ಯರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಮನಗರ ತಾಲೂಕಿನ ಜಯಪುರಗೇಟ್ ಹಾಗೂ ಮಾದಪುರ ಗೇಟ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತುಮಕೂರು ಜಿಲ್ಲೆ ಶಿರಾ ಮೂಲದ ಈರಣ್ಣ(೩೫)ಮೃತಪಟ್ಟವರು,
ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವೇಳೆ ದುರ್ಘಟನೆ ನಡೆದಿದೆ.
ಮತ್ತೊಂದೆಡೆ ಮಾದಪುರ ಗೇಟ್ ಬಳಿ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಒರ್ವ ಸ್ಥಳದಲ್ಲೇ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿ ಗಾಯಗೊಂಡಿದ್ದಾರೆ
ಮೈಸೂರಿನಿಂದ ಬೆಂಗಳೂರಿಗೆ ಹೋಗುವ ವೇಳೆ ದುರ್ಘಟನೆ ನಡೆದಿದ್ದು,ರಾಮನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ದ್ದಾರೆ.