ಪ್ರತ್ಯೇಕ ಬೆಂಕಿ ಅವಘಡ: 2.50 ಲಕ್ಷ ರೂ.ಹಾನಿ

ಕಲಬುರಗಿ,ಆ.21-ನಗರದ ರಾಮ ಮಂದಿರ ಬಳಿಯ ಹಣ್ಣಿನ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ಭಾನುವಾರ ರಾತ್ರಿ ನಡೆದಿದೆ. ಸುಮಾರು 1 ಲಕ್ಷ ರೂಪಾಯಿ ಹಾನಿಯಾಗಿದೆ.
ಸುದ್ದಿ ತಿಳಿದು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವುದರ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಇನ್ನೊಂದೆಡೆ ಮಹಾಗಾಂವ ಕ್ರಾಸ್‍ನಲ್ಲಿ ಕಿರಾಣಿ ಅಂಗಡಿಗೆ ಬೆಂಕಿ ತಗುಲಿ 1.50 ಲಕ್ಷ ರೂ.ಹಾನಿಯಾಗಿದ್ದು, ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.