ಪ್ರತ್ಯೇಕ ರಾಜ್ಯ ಪ್ರಸ್ತಾಪವಿಲ್ಲ: ಬೊಮ್ಮಾಯಿ ಸ್ಪಷ್ಟನೆ

ನವದೆಹಲಿ, ಜೂ.23-ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ನಿರ್ಮಾಣಕ್ಕೆ ಸಂಬಂಧಿಸಿದ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಪಡಿಸಿದ್ದಾರೆ.
ನಿನ್ನೆಯಷ್ಟೇ ಸಚಿವ ಉಮೆಶ್ ಖತ್ತಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಪ್ರಸ್ತಾಪಿಸಿ ಸರ್ಕಾರಕ್ಕೆ ಮುಜುಗುರ ಉಂಟು ಮಾಡಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿಗಳಿಂದ ಈ ಹೇಳಿಕೆಗೆ ಹೊರಬಿದ್ದಿದೆ.
ದೆಹಲಿ ಭೇಟಿ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಹ ಬೊಮ್ಮಾಯಿ, ಸಚಿವ ಉಮೇಶ್ ಖತ್ತಿ ಈ ಹಿಂದೆ ಹಲವು ಬಾರಿ ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯದ ಬಗ್ಗೆ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಅವರನ್ನೇ ಕೇಳಬೇಕು. ಸರ್ಕಾರದ ಮುಂದೆ ಆ ರೀತಿಯಾದ ಯಾವುದೇ ಪ್ರಸ್ತಾಪಗಳಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.
ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗೆ ಸೂಚಕರಾಗಿ ಸಹಿ ಮಾಡಲು ಆಗಮಿಸಿದ್ದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದಿಲ್ಲ. ಕೇಂದ್ರ ಸಚಿವರನ್ನೂ ಭೇಟಿ ಮಾಡಲ್ಲ. ನಾಮಪತ್ರ ಸಲ್ಲಿಕೆ ವಿಚಾರವೇ ಹೊರತು ಇನ್ಯಾವುದೇ ರಾಜಕೀಯ ಬೆಳವಣಿಗೆ ಇಲ್ಲ ಎಂದು ಸ್ಪಷ್ಟಪಡಿಸಿದರು.