ಪ್ರಥಮ ಕನ್ನಡ ಜಾನಪದ ಮಹಿಳಾ ಸಮ್ಮೇಳನ

ಯುವಜನಾಂಗ ಜಾನಪದ ಕ್ಷೇತ್ರದತ್ತ ಆಸಕ್ತಿ ಬೆಳೆಸಿಕೊಳ್ಳಿ – ಶಿವರಾಜ ಪಾಟೀಲ್
ರಾಯಚೂರು,ಫೆ.೨೬– ಜಾನಪದ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಸಮ್ಮೇಳಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ.ಯುವಜನಾಂಗ ಜಾನಪದ ಕ್ಷೇತ್ರದತ್ತ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ನಗರ ಶಾಸಕ ಡಾ ಶಿವರಾಜ ಪಾಟೀಲ್ ಹೇಳಿದರು.
ಅವರಿಂದು ನಗರದ ವೀರಶೈವ ಕಲ್ಯಾಣ
ಮಂಟಪದಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು,ಜಿಲ್ಲಾ ಕನ್ನಡ ಜಾನಪದ ಪರಿಷತ್ ರಾಯಚೂರು,ಜಿಲ್ಲಾ ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕ ರಾಯಚೂರು,ರಾಯಚೂರು ಜಿಲ್ಲಾ ಪ್ರಥಮ ಕನ್ನಡ ಜಾನಪದ ಮಹಿಳಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು,ಜಾನಪದ ಕಲೆಯನ್ನು ಜೀವಂತ ಕಲೆಯನ್ನು ಉಳಿಸಿಕೊಳ್ಳುವ ಸಂಕಲ್ಪ ನಾವೆಲ್ಲರೂ ಮನೆಮನೆಯಲ್ಲೂ ಕೈಗೊಳ್ಳಬೇಕು ಎಂದರು.
ಕನ್ನಡ ಜಾನಪದ ಸಮ್ಮೇಳನವು ಇವತ್ತು ಜಾತ್ರೆ ರೀತಿಯಲ್ಲಿ ನಡೆಯುತ್ತಿದೆ.ರಾಜ್ಯದ ಯಾವ ಜಿಲ್ಲೆಯಲ್ಲಿ ಕೂಡ ಕನ್ನಡ ಜಾನಪದ ಮಹಿಳಾ ಸಮ್ಮೇಳನ ನಡೆದಿಲ್ಲ.ಅದು ನನ್ನ ಕ್ಷೇತ್ರದಲ್ಲಿ ನಡೆಯುತ್ತಿರುವುದು ತುಂಬಾ ಸಂತೋಷ ತಂದಿದೆ.ನಮ್ಮ ಮಕ್ಕಳಿಗೆ ಜಾನಪದ ಕಲೆ ಬಗ್ಗೆ ತಿಳಿಸುವ ಕೆಲಸವಾಗಬೇಕಿದೆ.ಇಂತ ಸಮ್ಮೇಳನವು ಪ್ರತಿ ತಿಂಗಳು ನಮ್ಮ ನಮ್ಮ ವಾರ್ಡ್ ಗಳಲ್ಲಿ ನಡೆದಾಗ ಮಾತ್ರ ನಮ್ಮ ಮಕ್ಕಳು ಜಾನಪದ ಬಗ್ಗೆ ತಿಳಿದುಕೊಳ್ಳಲಿಕೆ ಸಾಧ್ಯವಾಗುತ್ತದೆ.ಅಂತ ಕೆಲಸ ನಾವು ನೀವು ಮಾಡಬೇಕು ಎಂದ ಅವರು,ಮುಂದಿನ ದಿನಗಳಲ್ಲಿ ಜಾನಪದ ಕಲೆಯನ್ನು ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಅಭಿವೃದ್ದಿ ಪಡಿಸುವುದಕ್ಕೆ ನಮ್ಮ ಸಂಪೂರ್ಣ ಸಹಕಾರ ಇರುತ್ತದೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ೧೨ ಜನರಿಗೆ ರಾಣಿ ರುದ್ರಮ್ಮದೇವಿ ಪ್ರಶಸ್ತಿ ಪ್ರದಾನವನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕಿಲ್ಲೇ ಬೃಹನ್ಮಠದ ಶಂತಾಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳು, ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿಸಿದ್ದರು.
ಈ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಬಸನಗೌಡ ದದ್ದಲ್, ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಎಸ್. ಬಾಲಾಜಿ, ಜಿಲ್ಲಾ ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಅಧ್ಯಕ್ಷ ದಾನಮ್ಮ ಶುಭಾಚಂದ್ರ, ಸಮ್ಮೇಳನ ಅಧ್ಯಕ್ಷರು ಡಾ. ಸರ್ವಮಂಗಳ ಸಕ್ರಿ, ವಿಧಾನಪರಿಷತ್ ಮಾಜಿ ಸದಸ್ಯ ಎನ್. ಶಂಕ್ರಪ್ಪ, ಆರ್.ಡಿ. ಎ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಲ್ಲುಂಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.