ಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಮಂಗಲಪಾಂಡೆ

ಕಲಬುರಗಿ:ಎ.8: ವ್ಯಾಪರಕ್ಕಾಗಿ ಭಾರತಕ್ಕೆ ಆಗಮಿಸಿದ ಬ್ರೀಟಿಷರು ಒಡೆದಾಳುವ ನೀತಿಯ ಮೂಲಕ ಸುಮಾರು 250 ವರ್ಷಗಳ ಕಾಲ ಆಡಳಿತ ಮಾಡಿ ದೇಶವನ್ನು ದಾಸ್ಯಕ್ಕೀಡು ಮಾಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಹೋರಾಟ ಮಾಡಿದರು. ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾರತದ ಸ್ವಾತಂತ್ರ್ಯಕಾಗ್ಕಿ ಪ್ರಥಮ ಬಾರಿಗೆ ಧ್ವನಿ ಎತ್ತುವ ಮೂಲಕ ಮಂಗಲಪಾಂಡೆ ಸ್ವಾತಂತ್ರ್ಯ ಚಳುವಳಿಗೆ ನಾಂದಿ ಹಾಡಿದ ಅಪ್ರತಿಮ ದೇಶಭಕ್ತರೆಂದು ಉಪನ್ಯಾಸಕ ಎಚ್.ಬಿ.ಪಾಟೀಲ ಅಭಿಪ್ರಾಯಪಟ್ಟರು.
ನಗರದ ‘ಎಂ.ಎಂ.ಎನ್ ಟ್ಯೂಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ಮಂಗಲಪಾಂಡೆ ಸ್ಮರಣೋತ್ಸವ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ಸಹ ಶಿಕ್ಷಕ ನರಸಪ್ಪ ಬಿರಾದಾರ ದೇಗಾಂವ ಮಾತನಾಡಿ, ಮಂಗಲಪಾಂಡೆ ಇತಿಹಾಸದಲ್ಲಿ ಅಜರಾಮರವಾಗಿದ್ದಾರೆ. ಅವರಲ್ಲಿರುವ ಅಪ್ಪಟ ದೇಶಭಕ್ತಿ ಇಂದಿನ ಎಲ್ಲಾ ಯುವಕರಿಗೆ ಮಾದರಿಯಾಗಿದೆಯೆಂದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಬಸವರಾಜ ಎಸ್.ಪುರಾಣೆ, ಅಣ್ಣಾರಾಯ ಮಂಗಾಣೆ, ಎಸ್.ಎಸ್.ಪಾಟೀಲ ಬಡದಾಳ, ಅಮರ ಜಿ.ಬಂಗರಗಿ ಸೇರಿದಂತೆ ಮತ್ತಿತರರಿದ್ದರು.