ಪ್ರಧಾನಮಂತ್ರಿ ಭೇಟಿ ಹಿನ್ನೆಲೆ:ವಿಮಾನ ನಿಲ್ದಾಣ ಸುತ್ತ ಡ್ರೋನ್ ಕ್ಯಾಮರಾ ಹಾರಾಟ ನಿಷೇಧ

ಕಲಬುರಗಿ,ಜ.17: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಜನವರಿ ಜನವರಿ 19 ರಂದು ಕಲಬುರಗಿ ಜಿಲ್ಲೆಯ ಮೂಲಕ ನೆರೆಯ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪೂರ ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಜನವರಿ 19ರ ಬೆಳಿಗ್ಗೆ 6 ಗಂಟೆಯಿಂದ ಸಾಯಂಕಾಲ 6 ಗಂಟೆಯ ವರೆಗೆ ಕಲಬುರಗಿ ವಿಮಾನ ನಿಲ್ದಾಣ ಹಾಗೂ ಸುತ್ತ ಮುತ್ತಲಿನ 10 ಕಿ.ಮೀ ಪ್ರದೇಶದಲ್ಲಿ ಸಿ.ಆರ್.ಪಿ.ಸಿ ಸೆಕ್ಷನ್-144ರಂತೆ ಯಾವುದೇ ಡೋನ್ ಕ್ಯಾಮೆರಾ ಉಪಯೋಗಿಸದಂತೆ ಮತ್ತು ಹಾರಿಸದಂತೆ ನಿಷೇಧಾಜ್ಞೆ ಜಾರಿಗೊಳಿಸಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಬುಧವಾರ ಆದೇಶ ಹೊರಡಿಸಿದ್ದಾರೆ.