ಪ್ರಧಾನಿಗೆ ಪತ್ರ ಬರೆದು ಯುವಕ ಆತ್ಮಹತ್ಯೆ

ಭೋಪಾಲ್,ಜ.೧- ದೇಹದ ಅಂಗಾಂಗ ಮಾರಿ ವಿದ್ಯುತ್ ಬಿಲ್ ಕಟ್ಟಿಕೊಳ್ಳಿ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಪತ್ರ ಬರೆದು ಯುವಕನೊಬ್ಬ ಕ್ಷುಲ್ಲಕ ಕಾರಣ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಚತುರ್‌ಪುರದಲ್ಲಿ ಸಂಭವಿಸಿದೆ.
ಕಿರಾಣಿ ಅಂಗಡಿ ನಡೆಸುತ್ತಿದ್ದ ಈತ ವಿದ್ಯುತ್‌ಬಿಲ್ ಪಾವತಿ ಮಾಡಲಾಗದೆ ಯುವಕ ಮುನೇಂದ್ರ ರಾಜ್‌ಪೂತ್ ವಿದ್ಯುತ್ ಬಿಲ್ ಪಾವತಿ ಮಾಡಲಾಗದೆ ಪ್ರಾಣವನ್ನು ಕಳೆದುಕೊಂಡಿದ್ದಾನೆ.
ಕೊರೊನಾ ಸಂಕಷ್ಟದ ಸಮಯದಲ್ಲಿ ವ್ಯಾಪರದಲ್ಲಿ ನಷ್ಟವುಂಟಾಗಿದ್ದರಿಂದ ಕೆಲ ದಿನಗಳಿಂದ ವಿದ್ಯುತ್ ಬಿಲ್ ಪಾವತಿ ಮಾಡಿರಲಿಲ್ಲ. ಬಿಲ್ ಕಟ್ಟದ ಕಾರಣ ವಿದ್ಯುತ್ ಬಿಲ್ ಮೊತ್ತ ೮೦ ಸಾವಿರ ರೂ.ಗೆ ಏರಿಕೆಯಾಗಿತ್ತು, ವಿದ್ಯುತ್ ಬಿಲ್ ಪಾವತಿ ಮಾಡದ ಕಾರಣ ಇಲಾಖೆ ಅಧಿಕಾರಿಗಳು ವಿದ್ಯುತ್ ಕಡಿತಗೊಳಿಸಿದ್ದರು. ಇದರಿಂದ ಕಿರಾಣಿ ಅಂಗಡಿ ಮುಚ್ಚಿದ್ದರಿಂದ ಅವಮಾನ ತಾಳಲಾರದೆ ನರೇಂದ್ರ ಮೋದಿ ಅವರಿಗೆ ೭ ಪುಟಗಳ ಡೆತ್ ನೋಟ್ ಬರೆದಿಟ್ಟು ಕಾರ್ಖಾನೆಯೊಂದರ ಪಕ್ಕದಲ್ಲಿದ್ದ ಮರಕ್ಕೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾನೆ.
ಮೋದಿ ಅವರೇ ನಾನು ನಿಮ್ಮ ಮೇಲೆ ಅಪಾರ ಪ್ರೀತಿ ಹಾಗೂ ಗೌರವ ಹೊಂದಿದ್ದೇನೆ. ಕೆಳ ಹಂತದ ಅಧಿಕಾರಿಗಳು ಬಡವರ ಬದುಕಿನ ಜತೆ ಚೆಲ್ಲಾಟವಾಡುತ್ತಿದ್ದಾರೆ. ನಾನು ವಿದ್ಯುತ್ ನಿಗಮ ನೀಡುತ್ತಿದ್ದ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದೇನೆ.ದೇಹದ ಅಂಗಾಂಗಳನ್ನು ಮಾರಾಟ ಮಾಡಿ ನನ್ನ ಬಿಲ್ ಪಾವತಿ ಮಾಡುವಂತೆ ಪತ್ರದಲ್ಲಿ ಬರೆದುಕೊಂಡಿದ್ದಾನೆ.
ಈ ಸಂಬಂಧ ಆತ್ಮಹತ್ಯೆಗೆ ಶರಣಾದ ಯುವಕನ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.