ಪ್ರಧಾನಿ ಭಾಷಣದ ವೇಳೆ ಶಿಷ್ಟಾಚಾರ ಉಲ್ಲಂಘನೆ: ಕೇಜ್ರಿವಾಲ್ ಕಚೇರಿ ವಿಷಾದ

ನವದೆಹಲಿ, ಏ.23- ದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಎದುರಾಗಿರುವ ಆಮ್ಲಜನಕ ಕೊರತೆ ಮತ್ತು ಲಸಿಕೆ ಪೂರೈಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುವ ಸಮಯದಲ್ಲಿ ಶಿಷ್ಚಾಚಾರ ಉಲ್ಲಂಘನೆಯಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುತ್ತಿದ್ದ ಸಮಯದಲ್ಲಿ ಮಧ್ಯಪ್ರವೇಶಿಸಿ ಮಾತನಾಡಿದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ದೆಹಲಿಯಲ್ಲಿ ಆಮ್ಲಜನಕ ಸಮಸ್ಯೆ ಎದುರಾಗಿದೆ ಇದರಿಂದ ಸಾಕಷ್ಟು ತೊಂದರೆಯಾಗಿದೆ. ಅಗತ್ಯ ಪ್ರಮಾಣದಲ್ಲಿ ಆಮ್ಲಜನಕ ಪೂರೈಸಿ ಎಂದು ಹೇಳಿದ್ದರು.

ಪ್ರಧಾನಿ ಮಾತನಾಡುತ್ತಿದ್ದ ಸಮಯದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಧ್ಯಪ್ರವೇಶಿಸಿ ಅವರ ಭಾಷಣಕ್ಕೆ ಅಡ್ಡಿಪಡಿಸಿದ ಕ್ರಮ ಸರಿಯಲ್ಲ ಇದು ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಪ್ರಧಾನಮಂತ್ರಿಗಳ ಕಚೇರಿ ತಿಳಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಚೇರಿ ಉದ್ದೇಶಪೂರ್ವಕವಾಗಿ ಮಾಡಿದ ಘಟನೆಯಲ್ಲ ದೆಹಲಿಯ ಸಮಸ್ಯೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನಕ್ಕೆ ತರಬೇಕಾಗಿತ್ತು ಅದನ್ನು ಮುಖ್ಯಮಂತ್ರಿಗಳು ಮಾಡಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟನೆ ನೀಡಿದೆ.

ಪ್ರಧಾನಿ ಅವರ ಭಾಷಣದ ಸಮಯದಲ್ಲಿ ಮಧ್ಯಪ್ರವೇಶಿಸಿ ಮಾತನಾಡಿದ ಘಟನೆಯ ಬಗ್ಗೆ ವಿಷಾದವನ್ನು ವ್ಯಕ್ತಪಡಿಸಿದೆ.

ಮುಖ್ಯಮಂತ್ರಿ ಅವರಿಂದ ಕೇಜ್ರಿವಾಲ್ ಅವರು ಮದ್ಯ ಪ್ರವೇಶ ಮಾಡಿ ದೆಹಲಿಯ ವಾಸ್ತವ ಸ್ತಿತಿಯನ್ನು ಪ್ರಧಾನಿಗೆ ಮನವರಿಕೆ ಮಾಡಿಕೊಟ್ಟ ನೇರ ಪ್ರಸಾರ ಮಾಡಿಲ್ಲ ಎಂದೂ ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸೇರಿದಂತೆ ಹನ್ನೊಂದು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಂದು ಬೆಳಿಗ್ಗೆ ವಿಡಿಯೋ ಸಂವಾದ ನಡೆಸಿದ್ದರು