ಪ್ರಧಾನಿ ವಿರುದ್ದ ಅವಿಶ್ವಾಸ :ಪ್ರತಿಪಕ್ಷಕ್ಕೆ ಸೋಲು:ಎರಡನೇ ಬಾರಿ ಗೆದ್ದು ಬೀಗಿದ ಮೋದಿ

ನವದೆಹಲಿ,ಆ.10- ಪ್ರಧಾನಿ ನರೇಂದ್ರ ಮೋದಿ ನರೇಂದ್ರ ಮೋದಿ ವಿರುದ್ದ ಪ್ರತಿಪಕ್ಷಗಳ ಮೈತ್ರಿಕೂಟದ ಸದಸ್ಯರು ಮಂಡಿಸಿದ್ದ ಅವಿಶ್ವಾಸ‌ಕ್ಕೆ ‌ಸೋಲಾಗಿದೆ. ಈ ಮೂಲಕ ಎರಡನೇ ಬಾರಿಗೆ ಅವಿಶ್ವಾಸದಲ್ಲಿ ಪ್ರಧಾನಿಗೆ ಗೆಲುವುವಾಗಿದೆ.

ಮಣಿಪುರ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೌನ ಪ್ರತಿಭಟಿಸಿ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಪ್ರತಿಪಕ್ಷಗಳ ಸದಸ್ಯರು ಸಭಾ ತ್ಯಾಗ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡಿದ ಬಳಿಕ ಲೋಕಸಭಾ ಅಧ್ಯಕ್ಷರು ಅವಿಶ್ವಾಸ ನಿರ್ಣಯವನ್ನು ಮತಕ್ಕೆ ಹಾಕಿದಾಗ ಅದಕ್ಕೆ ಸೋಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಗೆಲುವು ಸಾದಿಸಿದ್ದಾರೆ.

ಮಣಿಪುರ ಹಿಂಸಾಚಾರ :ಕಠಿಣ ಕ್ರಮ ಭರವಸೆ

ಮಣಿಪುರದಲ್ಲಿ ಹಿಂಸಾಚಾರಕ್ಕೆ ಪ್ರೋತ್ಸಾಹ ನೀಡಿದವರು ಮತ್ತು ಅದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಲೋಕಸಭೆಯಲ್ಲಿಂದು ಗುಡುಗಿದ್ದಾರೆ.

ತಪ್ಪಿತಸ್ಥರು ಯಾರೇ ಆದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಈಶಾನ್ಯ ರಾಜ್ಯಗಳಲ್ಲಿ ಒಂದಾದ ಮಣಿಪರದಲ್ಲಿ ಶಾಂತಿ ಮತ್ತು ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. 

ಪ್ರಧಾನಿ‌ನರೇಂದ್ರ ವಿರುದ್ದ ಪ್ರತಿ ಪಕ್ಷಗಳು ಲೋಕಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಗೆ ಉತ್ತರ ನೀಡಿದ ಪ್ರಧಾನಿ ಮಣಿಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಮಣಿಪುರ ಸರ್ಕಾರ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲೂ ಎನ್‌ಡಿಎ ಮತ್ತು ಬಿಜೆಪಿ ಭಾರೀ ಬಹುಮತದಿಂದ ಅಧಿಕಾರಕ್ಕೆ ಬರಲಿದೆ .ಮುಂಬರುವ ಲೋಕಸಭಾ ಚುನಾವಣೆ ಫಲಿತಾಂಶ ಈ ಹಿಂದಿನ ಎಲ್ಲ ದಾಖಲೆಗಳನ್ನು ಅಳಿಸಿ ಹಾಕಲಿದೆಬೆಣಮದು ವಿಶ್ವಾಸ ವ್ಯಕ್ತಪಡಿಸಿದರು

ಅವಿಶ್ವಾಸ ನಿರ್ಣಯದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ಯಾವಗೆಲ್ಲಾ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆಯೋ ಆಗ ಎನ್‌ಡಿಎಗೆ ಶುಭಸೂಚಕ ಎಂದು ಅವರು ತಿಳಿಸಿದ್ದಾರೆ. 

ದೇಶದ ಜನ ಮತ್ತೆ ಮತ್ತೆ ಕೇಂದ್ರ ಸರ್ಕಾರದ ಮೇಲೆ ನಂಬಿಕೆ ಇಡುತ್ತಿದ್ದಾರೆ ಅದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಲಿದ್ದೇನೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯ ಸರ್ಕಾರದ ವಿರುದ್ಧ ಅಲ್ಲ ಬದಲಾಗಿ ವಿರೋಧ ಪಕ್ಷಗಳಿಗೆ ಒಗ್ಗಟ್ಟಿನ ಪರೀಕ್ಷೆಯ ಸಮಯ ಎಂದು ಹೇಳಿದ್ದಾರೆ. 

ವಿರೋಧ ಪಕ್ಷಗಳಿಗೆ ರಾಷ್ಟ್ರದ ಹಿತಾಸಕ್ತಿ, ಬಡವರ ಹಸಿವಿಗಿಂತ ತಮ್ಮ ರಾಜಕೀಯ ಹಸಿವೇ ಹೆಚ್ಚಾಗಿದೆ ಎಂದು ಟೀಕೆ ವ್ಯಕ್ತಪಡಿಸಿದ ಅವರು, ವಿರೋಧ ಪಕ್ಷದ ಸದಸ್ಯರು ಚರ್ಚೆಯಲ್ಲಿ ಪಾಲ್ಗೊಳ್ಳಲಿಲ್ಲ ಇವರಿಗೆ ಜನರ ಕಲ್ಯಾಣ ಬೇಕಾಗಿಲ್ಲ ಎಂದು ಅವರು ತಿಳಿಸಿದ್ದಾರೆ. 

ಪ್ರತಿಪಕ್ಷಗಳಿಂದ ಸಭಾತ್ಯಾಗ

ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡುವ ಸಮಯದಲ್ಲಿ ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡಿದ್ದ ಕೆಲವು ಪ್ರತಿಪಕ್ಷಗಳ ಸದಸ್ಯರು ಗೈರು ಹಾಜರಾಗಿದ್ದರು. ಈ ನಡುವೆ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ನಡೆಸಿದರು.   

ಪ್ರಧಾನಿ ಭಾಷಣದ ನಂತರ ಲೋಕಸಭಾಧ್ಯಕ್ಷರು ಅವಿಶ್ವಾಸ ನಿರ್ಣಯವನ್ನು ಮತಕ್ಕೆ ಹಾಕಿದಾಗ ಅದಕ್ಕೆ ಸೋಲು ಎದುರಾಯಿತು