ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಮಂಜಪ್ಪ ಅಧಿಕಾರ ಸ್ವೀಕಾರ

ಜಗಳೂರು.ಏ.೨೪: ಜಗಳೂರು ಪಟ್ಟಣದ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಮಂಜಪ್ಪ ಶುಕ್ರುವಾರ ಅಧಿಕಾರ ಸ್ವೀಕರಿಸಿದ್ದಾರೆ.ಗುರುಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷರಾಗಿ ಕೆಲಸ ನಿರ್ವಹಿಸುವ ಇವರು ಇಸಿಓ ಆಗಿ ಅನೆಕ ವರ್ಷಗಳ ಕಾಲ ಕ್ಷೇತ್ರ ಶಿಕ್ಷಣ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ನೂತನ ಕ್ಷೇತ್ರಶಿಕ್ಷಣಾಧಿಕಾರಿಗಳನ್ನು ಪ್ರಾಥಮಿಕ ಶಾಲಾಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಹುಲೆಪ್ಪ, ಕಾರ್ಯದರ್ಶಿ ಪ್ರಕಾಶ್, ಮಾಜಿ ಎನ್.ಜಿ.ಓ. ಅಧ್ಯಕ್ಷ ಆನಂದಪ್ಪ, ಸತೀಶ್ ಸೇರಿದಂತೆ ಇತರೇ ಪದಾಧಿಕಾರಿಗಳು ಪುಸ್ತಕ ನೀಡಿ, ಹೂವಿನ ಹಾರ ಹಾಕಿ ಅಭಿನಂದಿಸಲಾಯಿತು.