ಪ್ರಭಾಸ್ ಅಭಿನಯದ ಆದಿಪುರುಷ್ ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ

ಹೈದಾರಬಾದ್, ನ ೧೯- ಬಹುನಿರೀಕ್ಷಿತ ಬಾಹುಬಲಿ ಪ್ರಭಾಸ್ ಅಭಿನಯಿಸಲಿರುವ ?ಆದಿಪುರುಷ್? ಸಿನಿಮಾದ ಬಿಡುಗಡೆ ದಿನಾಂಕವನ್ನು ಈಗಾಗಲೇ ಚಿತ್ರತಂಡ ಪ್ರಕಟಿಸಿ ಅಭಿಮಾನಿಗಳಲ್ಲಿ ಹುಬ್ಬೆರಿಸುವಂತೆ ಮಾಡಿದೆ.
ಹೌದು ಬಾಲಿವುಡ್‌ನ ಖ್ಯಾತ ನಿರ್ದೇಶಕ ಓಂ ರಾವತ್ ಹಾಗೂ ಬಾಹುಬಲಿ ಪ್ರಭಾಸ್ ಅವರ ಕಾಂಬಿನೇಷನ್ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ಆದಿಪುರುಷ್ ಸಿನಿಮಾ ಯಾವಾಗ ಬಿಡುಗಡೆಯಾಗಲಿದೆ ಎಂದು ಕಾದು ಕುಳಿತಿದ್ದ ಅಭಿಮಾನಿಗಳಿಗೆ ಸಂತಸ ಸುದ್ದಿಯನ್ನು ಚಿತ್ರತಂಡ ನೀಡಿದೆ.
ಸದ್ಯ ಟಾಲಿವುಡ್ ಡಾರ್ಲಿಂಗ್ ಕೈಯಲ್ಲಿ ಮೂರು ಪ್ಯಾನ್ ಇಂಡಿಯಾ ಸಿನಿಮಾಗಳಿವೆ. ಲಾಕ್ಡೌನ್ ಸಡಿಲಗೊಳ್ಳತ್ತಿದ್ದಂತೆಯೇ ನಿರ್ದೇಶಕ ಓಂ ರಾವತ್ ಸಿನಿಮಾದ ಟೈಟಲ್ ಪೋಸ್ಟರ್ ಅನ್ನು ರಿಲೀಸ್ ಮಾಡಿದ್ದಾರೆ. ಇದರಲ್ಲಿ ಪ್ರಭಾಸ್ ಬಿಲ್ಲು ಬಾಣ ಹಿಡದು ನಿಂತಿದ್ದಾರೆ. ಇದರಿಂದಲೇ ತಿಳಿಯುತ್ತದೆ ಡಾರ್ಲಿಂಗ್ ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂದು. ಇನ್ನು ಈ ಚಿತ್ರದ ಕುರಿತಾಗಿ ಕೆಲವೇ ನಿಮಿಷಗಳ ಹಿಂದೆಯಷ್ಟೆ ಚಿತ್ರತಂಡ ಮತ್ತೊಂದು ಪ್ರಕಟಣೆ ಮಾಡಿದೆ. ಇತ್ತೀಚೆಗಷ್ಟೆ ಆದಿಪುರುಷ್ ಚಿತ್ರದ ಟೈಟಲ್ ಪೋಸ್ಟರ್ ಹಾಗೂ ಮೋಷನ್ ಪೋಸ್ಟರ್ ರಿಲೀಸ್ ಆಗಿದ್ದು, ಪ್ರಭಾಸ್ ಅಭಿಮಾನಿಗಳು ಅದನ್ನು ಟ್ವಿಟರ್ನಲ್ಲಿ ಟ್ರೆಂಡ್ ಮಾಡಿದ್ದರು. ಈಗ ಈ ಸಿನಿಮಾದ ರಿಲೀಸ್ ದಿನಾಂಕವನ್ನು ಪ್ರಕಟಿಸಿದೆ ಚಿತ್ರತಂಡ.
ಇನ್ನೂ ಸಿನಿಮಾ ಚಿತ್ರೀಕರಣವೇ ಆರಂಭವಾಗಿಲ್ಲ. ಅದಾಗಲೇ ನಿರ್ದೇಶಕ ಓಂ ರಾವತ್ ತಮ್ಮ ಚಿತ್ರದ ರಿಲೀಸ್ ದಿನಾಂಕ ಪ್ರಕಟಿಸಿದ್ದಾರೆ. ೨೦೨೨ ಆಗಸ್ಟ್ ೧೧ಕ್ಕೆ ಆದಿಪುರುಷ್ ಆಗಿ ತೆರೆ ಮೇಲೆ ಮಿಂಚಲಿದ್ದಾರೆ ಪ್ರಭಾಸ್ ಎಂದು ತಿಳಿಸಿದೆ. ಅಲ್ಲದೆ ಈ ಸಿನಿಮಾದಲ್ಲಿ ಪ್ರಭಾಸ್ಗೆ ನಾಯಕಿಯಾಗಿ ಯಾರು ನಟಿಸಲಿದ್ದಾರೆ ಅನ್ನೋದು ಇನ್ನೂ ನಿರ್ಧಾರವಾಗಿಲ್ಲ.ಓಂ ರಾವತ್ ನಿರ್ದೇಶನದಲ್ಲಿ ಪ್ರಭಾಸ್ ನಟಿಸುತ್ತಿರುವ ಮೊದಲ ಚಿತ್ರ ಇದಾಗಿದ್ದು, ಇದರಲ್ಲಿ ವಿಲನ್ ಪಾತ್ರದಲ್ಲಿ ಸೈಫ್ ಅಲಿ ಖಾನ್ ಕಾಣಿಸಿಕೊಳ್ಳಲಿದ್ದಾರೆ.