ಪ್ರಭಾ ಮಲ್ಲಿಕಾರ್ಜುನ್ ಗೆಲುವು ಶತಸಿದ್ದ; ಸಲೀಂ‌ಅಹ್ಮದ್

ಸಂಜೆವಾಣಿ ವಾರ್ತೆ

ದಾವಣಗೆರೆ.ಏ.೧೭; ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನರವರ ಪರ ಜನರ ಒಲವಿದ್ದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅವರ ಗೆಲುವು ಶತಸಿದ್ಧವೆಂದು ಕರ್ನಾಟಕ ಸರ್ಕಾರದ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್  ಅಭಿಪ್ರಾಯಪಟ್ಟರು ಅವರು  ನಗರದ ಶ್ರೀ ಕಲ್ಲೇಶ್ವರ ರೈಸ್ ಮಿಲ್ ನಲ್ಲಿ ಏರ್ಪಡಿಸಲಾಗಿದ್ದ 14ನೇ ವಾರ್ಡಿನ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರುಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು ಕಾಂಗ್ರೆಸ್ ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ ಗೆದ್ದೆ ಗೆಲ್ಲುತ್ತರೆ ಎಂಬ ವರದಿ ಇದೆ. ಅವರ ನಿಸ್ವಾರ್ಥ ಸೇವೆಯನ್ನು ಜನರು ಗಮನಿಸಿದ್ದಾರೆ.ಕಳೆದ ಹತ್ತು ವರ್ಷಗಳ ಮೋದಿ ಆಡಳಿತಕ್ಕೆ ಜನರು ಬೇಸತ್ತಿದ್ದು ದೇಶದ ಜನರು ಬದಲಾವಣೆ ಬಯಸಿದ್ದರೆಂದು ಅವರು ತಿಳಿಸಿದರು. ಕರ್ನಾಟಕ ರಾಜ್ಯಕ್ಕೆ ಸೂಕ್ತ ಪರಿಹಾರ ನೀಡದ ಕೇಂದ್ರ ಸರ್ಕಾರ ಮತ ಕೇಳುವ ಹಕ್ಕನ್ನು ಕಳೆದು ಕೊಂಡಿದ್ದಾರೆಂದು ಸಲೀಂ ಅಹ್ಮದ್ ಹೇಳಿದರು. ಬರ ಪರಿಹಾರ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿದೆ. ಕೇಂದ್ರ ಸಚಿವರುಗಳಾದ ಅಮಿತ್ ಶಾ, ನಿರ್ಮಲ ಸೀತಾರಾಮನ್ ಸುಳ್ಳು ಹೇಳುತಿದ್ದಾರೆ ಕರ್ನಾಟಕ ರಾಜ್ಯಕ್ಕೆ ತಾರತಮ್ಯ ಧೋರಣೆ ತೋರುತ್ತಿರುವುದರಿಂದ ಜನ ಬದಲಾವಣೆ ಬಯಸುತ್ತಿದ್ದಾರೆ ಎಂದು ತಿಳಿಸಿದರು.ಡಾ. ಶಾಮನೂರು ಶಿವಶಂಕರಪ್ಪ, ಎಸ್ ಎಸ್ ಮಲ್ಲಿಕಾರ್ಜುನ ದಾವಣಗೆರೆ ಜಿಲ್ಲೆಗೆ ಮಾಡಿರುವ ಅಭಿವೃದ್ಧಿ ಕಾರ್ಯಕ್ರಮಗಳು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ ಗೆಲುವಿಗೆ ಸಹಕಾಯಾಗಲಿದೆ ಎಂದು ಅವರು ಹೇಳಿದರು.ಕಾಂಗ್ರೆಸ್ ನಿನ್ನೆ ಮೊನ್ನೆಯ ಪಕ್ಷವಲ್ಲ ಬೃಹತ್ 140 ವರುಷಗಳ ಇತಿಹಾಸವಿದೆ. ಪಂಡಿತ್ ನೆಹರು 17 ವರುಷ ಹಾಗೂ ಇಂದಿರಾಗಾAಧಿ ಅವರು 16 ವರ್ಷಗಳ ಕಾಲ ಪ್ರಧಾನಿಯಾಗಿದ್ದರು. ಅವರು ರೂಪಿಸಿದ 20 ಅಂಶಗಳ ಕಾರ್ಯಕ್ರಮಗಳು ಮಹಿಳೆಯರ ಬಗ್ಗೆ ಚಿಂತನೆ, ಉಳುವವನೆ ಹೊಲದೊಡೆಯ ಬ್ಯಾಂಕ್ ರಾಷ್ಟಿçÃಕರಣ ಯೋಜನೆಗಳು ಜನಪ್ರಿಯ ಬಡವರ ಕಲ್ಯಾಣ ಕಾರ್ಯಕ್ರಮಗಳಾಗಿದ್ದವು ಎಂದು ಸಲೀಂ ಅಹ್ಮದ್‌ರವರು ಮೇಲುಕು ಹಾಕಿದರು.ಡಾ. ಶಾಮನೂರು ಶಿವಶಂಕರಪ್ಪ ಮಾತನಾಡಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ನೀಡಿದ್ದು ಬಡವರಿಗೆ ತಲುಪಿವೆ. ಅದರಲ್ಲೂ ಮಹಿಳೆಯರಿಗೆ ಹೆಚ್ಚಿನ ಸಹಾಯ ನೀಡಲಾಗಿದೆ. ಆದುದರಿಂದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್‌ ವಿಜಯ ಶಾಲಿಯಾಗಲಿದ್ದಾರೆಂದು ತಿಳಿಸಿದರು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ಮುಸ್ಲಿಂ ಸಮಾಜದ ಅಧ್ಯಕ್ಷರಾದ ದಾದು ಸೇಟ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಯ್ಯೂಬ್ ಪೈಲ್ವಾನ್ ಮಹಾನಗರ ಪಾಲಿಕೆ ಸದಸ್ಯರುಗಳಾದ ಕೆ. ಚಮನ್‌ಸಾಬ್, ಎ.ಬಿ. ರಹೀಂ, ಜಾಕೀರ್ ಅಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮುಸ್ಲಿಂ ಧರ್ಮ ಗುರುಗಳಾದ ಇಬ್ರಾಹಿಂ ಸಖಾಫಿ, ಜಯಪ್ರಕಾಶ್ ಸೇರಿದಂತೆ ಇತರರು ಹಾಜರಿದ್ದರು.