ಪ್ರಯಾಣಿಕರನ್ನು ಬಿಟ್ಟು ವಿಮಾನ ಟೇಕಾಫ್

ನವದೆಹಲಿ,ಜ.೧೯-ಇತ್ತೀಚಿಗೆ ತಾನೇ ಪ್ರಯಾಣಿಕರನ್ನು ಬಿಟ್ಟು ವಿಮಾನವೊಂದು ಟೇಕಾಫ್ ಆಗಿ ವಿವಾದ ಸೃಷ್ಠಿಸಿದ ಬೆನ್ನಲೇ ಇದೀಗ ಅಮೃತಸರ ಸಿಂಗಪುರ ನಡುವೆ ಸಂಚರಿಸುವ ಸ್ಕೂಟ್ ಏರ್‌ಲೈನ್ಸ್ ವಿಮಾನವು ೩೫ ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಆಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸ್ಕೂಟ್ ಏರ್‌ಲೈನ್ಸ್ ವಿಮಾನವು ೩೫ ಪ್ರಯಾಣಿಕರನ್ನು ಬಿಟ್ಟು ಹೊರಟಿರು ಬಗ್ಗೆ ಈ ಬಗ್ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಈ ವೈಫಲ್ಯದ ಬಗ್ಗೆ ತನಿಖೆಗೆ ಆದೇಶಿಸಿದೆ.

ಅಮೃತಸರ ವಿಮಾನ ನಿಲ್ದಾಣದಿಂದ ವಿಮಾನವು ಹೊರಡಬೇಕಿತ್ತು, ಆದರೆ ೩೫ ಪ್ರಯಾಣಿಕರನ್ನು ಬಿಟ್ಟು ೩ ಗಂಟೆಗೆ ಟೇಕ್ ಆಫ್ ಆಗಿತ್ತು. ಘಟನೆಗೆ ಕಾರಣ ತಿಳಿದುಬಂದಿಲ್ಲ.

ಘಟನೆಯಿಂದ ಕೆರಳಿದ ಪ್ರಯಾಣಿಕರು ಅಮೃತಸರ ವಿಮಾನ ನಿಲ್ದಾಣದಲ್ಲಿಯೇ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ಗೋ ಫಸ್ಟ್ ವಿಮಾನವು ೫೫ ಪ್ರಯಾಣಿಕರನ್ನು ಬಿಟ್ಟು ಹಾರಿದ್ದು ಇತ್ತೀಚೆಗೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಈಗ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ