ಪ್ರವಾದಿ ಮುಹಮ್ಮದ್ ರ ಸಂದೇಶ ಕಾರ್ಯಕ್ರಮ

ದಾವಣಗೆರೆ. ನ.೨೭; ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ನ.೨೯ ರಂದು ನಗರದ ರೋಟರಿಬಾಲಭವನದಲ್ಲಿ ಸಂಜೆ ೬.೩೦ ಕ್ಕೆ ಸೌಹಾರ್ದ ಸಮಾಜ ಮತ್ತು ಪ್ರವಾದಿ ಮುಹಮ್ಮದ್ ರ ಸಂದೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಆಯೂಬ್ ಖಾನ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು ಪ್ರವಾದಿ ಮುಹಮ್ಮದ್ ಅವರ ಜೀವನ ಮತ್ತು ಸಂದೇಶ ಸಾರ್ವಕಾಲಿಕ. ಜಗತ್ತಿನಾದ್ಯಂತ ಜನಮನ್ನಣೆ ಗಳಿಸಿದೆ.ಈ ಮಹಾನ್ ವ್ಯಕ್ತಿತ್ವದ ಸಂದೇಶ ಮತ್ತು ಬೋಧನೆಗಳನ್ನು ಸಾರ್ವಜನಿಕರಿಗೆ ಪರಿಚಯಿಸುವ ನಿಟ್ಟಿನಲ್ಲಿ ಸಂದೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾಣೇಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಸ್ವಾಮೀಜಿ, ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಇ,ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಆಗಮಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಜೀರ್ ಅಹಮ್ಮದ್, ಮಹಮ್ಮದ್ ಖಾಲಿದ್,ನಿಜಾಮುದ್ದೀನ್ ಇದ್ದರು.