ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಲಿಟೂರಿಸ್‍ಂ ಹಾಗೂ ಹೈಟೆಕ್ ಹೋಟೆಲ್‍ಗಳ ನಿರ್ಮಾಣ ಅಗತ್ಯ:ಸಚಿವ ಸಿ.ಪಿ. ಯೋಗೇಶ್ವರ

ಕಲಬುರಗಿ:ಏ.06: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಹೆಲಿಟೂರಿಸ್‍ಂ (ಹೆಲಿಪೆÇೀರ್ಟ್) ಯೋಜನೆ ರೂಪಿಸಲಾಗಿದೆ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ ಅವರು ತಿಳಿಸಿದ್ದಾರೆ
ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುವುದಕ್ಕಾಗಿ ಕಲಬುರಗಿಯನ್ನು ಆಯ್ಕೆ ಮಾಡಲಾಗಿದೆ. ರಾಜ್ಯದಲ್ಲಿ ಈಗಾಗಲೇ ಬೆಂಗಳೂರು, ಮೈಸೂರು, ಮಂಗಳೂರು, ಹಂಪಿ, ಹುಬ್ಬಳ್ಳಿ ಹಾಗೂ ಕಲಬುರಗಿಯಲ್ಲಿ ತಲಾ 10 ಕೋಟಿ ರೂ. ವೆಚ್ಚದಲ್ಲಿ 5 ಏಕರೆ ಜಾಗದಲ್ಲಿ ಹೆಲಿಪೆÇೀರ್ಟ್ ನಿರ್ಮಾಣ ಮಾಡಿ, ದೇಶ-ವಿದೇಶಗಳ ಪ್ರವಾಸಿಗರನ್ನು ಹಾಗೂ ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆ ಒದಗಿಸಲು ಸಹಾಯವಾಗುವಂತೆ ಯೋಜನೆ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸಲಾಗಿದೆ. ಮೂರು ತಿಂಗಳ ಒಳಗಾಗಿ ಕಲಬುರಗಿ ಜಿಲ್ಲೆಯಲ್ಲಿ ಹೆಲಿಪ್ಯಾಡ್ ತನ್ನ ಪ್ರಥಮ ಪ್ರಾಯೋಗಿಕ ಕಾರ್ಯ ನಿರ್ವಹಿಸಲಿವೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಈಗಾಗಲೇ ಏರಪೆÇೀರ್ಟ್ ಕಾರ್ಯ ನಿರ್ವಹಿಸುತ್ತಿದ್ದು, ಬೇರೆ ಪ್ರದೇಶಗಳಿಂದ ಆಗಮಿಸುವ ಪ್ರವಾಸಿಗರೆ ತಂಗಲು ಹೈಟೆಕ್ ಹೋಟೆಲ್ ವ್ಯವಸ್ಥೆ ಇಲ್ಲದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಿಲ್ಲ. ಆದರಿಂದ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ 3 ಸ್ಟಾರ್ ಹಾಗೂ 5 ಸ್ಟಾರ್ ಹೋಟೇಲ್‍ಗಳನ್ನು ನಿರ್ಮಿಸಲು ಮುಂದಾಗುವ ಹೋಟೆಲ್ ಉದ್ಯಮಿಗಳಿಗೆ ಶೇ 25 ರಷ್ಟು ಸಬ್ಸಿಡಿಯನ್ನು ಪ್ರವಾಸೋದ್ಯಮ ಇಲಾಖೆಯಿಂದ ನೀಡಲಾಗುವುದು. ಈ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಪ್ರವಾಸೋದ್ಯಮದ ಅಭಿವೃದ್ದಿ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಚಂದ್ರಂಪಳ್ಳಿ ಜಂಗಲ್ ಲಾಡ್ಜ್ ಹಾಗೂ ಎತ್ತಿಪೆÇೀತ ಜಲಪಾತ ತಾಣದಲ್ಲಿ ಪ್ರವಾಸಿಗರಿಗೆ ಸೌಲಭ್ಯ ಕಲ್ಪಿಸಲು ಹಾಗೂ ಪ್ರವಾಸಿಗರನ್ನು ಸೆಳೆಯಲು ಪ್ರವಾಸೋದ್ಯಮ ಇಲಾಖೆಯಿಂದ 2 ಕೋಟಿ ಅನುದಾನ ಮಂಜೂರು ಮಾಡಲಾಗುವುದು ಎಂದು ಸಚಿವರು ಹೇಳಿದರು
ಈ ಸಂದರ್ಭದಲ್ಲಿ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಹಾಗೂ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಎನ್.ಇ.ಕೆ.ಎಸ್.ಆರ್.ಟಿ.ಸಿ.ಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ, ಅಫಜಲಪೂರ ಶಾಸಕ ಎಂ.ವೈ. ಪಾಟೀಲ, ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ, ಚಿಂಚೋಳಿ ಶಾಸಕ ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಪಂಕಜಕುಮಾರ ಪಾಂಡೆ, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಶ ಸಾಸಿ, ಮಹಾನಗರ ಪಾಲಿಕೆ ಆಯುಕ್ತರಾದ ಸ್ನೇಹಲ್ ಸುಧಾಕರ ಲೋಖಂಡೆ ಉಪಸ್ಥಿತರಿದ್ದರು.