ಪ್ರವಾಸೋದ್ಯಮ ಸಚಿವರ ಪ್ರವಾಸ

ಕಲಬುರಗಿ,ಏ.01:ರಾಜ್ಯದ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ವರ ಅವರು ಇದೇ ಏಪ್ರಿಲ್ 5 ಹಾಗೂ 6 ರಂದು ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ ಈ ಕೆಳಕಂಡ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಸೋಮವಾರ ಏಪ್ರಿಲ್ 5 ರಂದು ಬೆಳಿಗ್ಗೆ 11 ಗಂಟೆಗೆ ಚಿಂಚೋಳಿ ತಾಲೂಕಿನ ಎತ್ತಿಪೊತ ಜಲಪಾತಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡುವರು. ಮಧ್ಯಾಹ್ನ 12 ಗಂಟೆಗೆ ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಜಲಾಶಯಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡುವರು. ಚಿಂಚೋಳಿಯಲ್ಲಿ ಅಂದು ಮಧ್ಯಾಹ್ನ 1.30 ರಿಂದ ಸಂಜೆ 6 ಗಂಟೆಯವರೆಗೆ ಸಚಿವರ ಕಾರ್ಯಕ್ರಮ ಕಾಯ್ದರಿಸಲಾಗಿದೆ. ನಂತರ ಸಂಜೆ 7 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಮಂಗಳವಾರ ಏಪ್ರಿಲ್ 6 ರಂದು ಬೆಳಿಗ್ಗೆ 8.30ಕ್ಕೆ ಅಫಜಲಪುರ ತಾಲೂಕಿನ ಗಾಣಗಾಪುರದ ಶ್ರೀ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡುವರು. ಬೆಳಗಿನ 9.30 ರಿಂದ ಬೆಳಿಗ್ಗೆ 10.15 ಗಂಟೆಯವರೆಗೆ ಸಚಿವರ ಕಾರ್ಯಕ್ರಮ ಕಾಯ್ದಿರಿಸಲಾಗಿದೆ. ಬೆಳಿಗ್ಗೆ 10.30ಕ್ಕೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರವಾಸೋದ್ಯಮ ಮತ್ತು ಪರಿಸರ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 12.45 ಗಂಟೆಗೆ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವರು. ಮಧ್ಯಾಹ್ನ 1.20 ಗಂಟೆಗೆ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ, ಸಾಂಸ್ಕøತಿಕ ಸಂಘಕ್ಕೆ ಭೇಟಿ ನೀಡಿ ಅಧ್ಯಕ್ಷರೊಡನೆ ಚರ್ಚೆ ನಡೆಸುವರು. ಅಂದು ಸಂಜೆ 4.25ಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.