ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರರಿಗೆ ಅಷ್ಠಗಿಯಿಂದ ಸನ್ಮಾನ

ಕಲಬುರಗಿ.ಏ.06: ನಗರಕ್ಕೆ ಆಗಮಿಸಿದ ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರು, ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ್ ಅವರನ್ನು ಬಿಜೆಪಿ ಎಸ್ ಸಿ ಮೋರ್ಚಾ ನೂತನ ರಾಜ್ಯ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಸನ್ಮಾನಿಸಿದರು.
ಸಂದರ್ಭದಲ್ಲಿ ಕಲಬುರ್ಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಶಿವರಾಜ್ ಪಾಟೀಲ್ ರದ್ದೆವಾಡಗಿ ಮಹಾನಗರ ಜಿಲ್ಲಾ ಅಧ್ಯಕ್ಷರಾದ ಶಿದ್ದಾಜಿ ಪಾಟೀಲ್ ಕಲ್ಲಹಂಗರಗಾ, ಮಾದ್ಯಮ ಸಂಚಾಲಕ ಅರುಣ್ ಕುಲಕರ್ಣಿ ಇದ್ದರು.