ಪ್ರವಾಹ ಮುಂಜಾಗ್ರತೆ ಯಾಕಿಲ್ಲ?:ಸಿದ್ದರಾಮಯ್ಯ

ಕಲಬುರಗಿ ಜು 14: ಪ್ರವಾಹ ಸಮಸ್ಯೆ ಬಗ್ಗೆ ಸರ್ಕಾರ ಮುಂಚಿತವಾಗಿ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ವಿರುದ್ಧ ಹರಿಹಾಯ್ದರು.
ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರೈತರು ಸಂಕಷ್ಟಕ್ಕೆ ಸಿಲುಕಿದ ನಂತರ ಕ್ರಮಕ್ಕೆ ಮುಂದಾಗುತ್ತಾರೆ.2019 ರ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೊಟ್ಟಿಲ್ಲ .ಈಗ ಅದೇ ಗ್ರಾಮಗಳಿಗೆ ಪ್ರವಾಹ ಬರುತ್ತಿದೆ. ಮನೆ ಮತ್ತು ಜೀವ ಕಳಕೊಂಡವರಿಗೆ ಪರಿಹಾರ ಕೊಡಬೇಕು .ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗಳಿಗೆ ಬರುವುದೇ ಇಲ್ಲ ಎಂದು ಆಕ್ಷೇಪಿಸಿದರು.