ಪ್ರವಾಹ ಸಂತ್ರಸ್ತರಿಗೆ ತ್ವರಿತಗತಿಯಲ್ಲಿ ಪರಿಹಾರ ನೀಡಲು ಅಗ್ರಹಿಸಿ ಪ್ರತಿಭಟನೆ

ಕಲಬುರಗಿ,ನ.3- ಕಳೆದ ತಿಂಗಳು ಸುರಿದ ಭಾರಿ ಮಳೆ ನೆರೆ ಮತ್ತು ನದಿ ಪ್ರವಾಹದಿಂದಾಗಿ ಇಲ್ಲಿನ ಕೃಷಿಕರು, ಗ್ರಾಮಸ್ಥರು ಮತ್ತು ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಇವರೆಲ್ಲರಿಗೆ ತ್ವರಿತಗತಿಯಲ್ಲಿ ಪರಿಹಾರ ನೀಡುವಂತೆ ಆಗ್ರಹಿಸಿ ವೆಲ್ಫರ್ ಪಾರ್ಟಿ ಆಫ್ ಇಂಡಿಯಾ ನೇತೃತ್ವದಲ್ಲಿಂದು ಪ್ರತಿಭಟನೆ ಕೈಗೊಳ್ಳಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಕೈಗೊಂಡ ಪಕ್ಷದ ಕಾರ್ಯಕರ್ತರು, ಮಳೆ ಮತ್ತು ನೆರೆಯಿಂದ ಉತ್ತರ ಕರ್ನಾಟಕ ಪ್ರದೇಶದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ, ಇಲ್ಲಿನ ಸಂತ್ರಸ್ತರ ನೆರವಿಗೆ ಮುಂದಾಗದ ರಾಜ್ಯ ಸರ್ಕಾರ ಪ್ರಾದೇಶಿಕ ಅಸಮಾನತೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ತಮ್ಮ ಆಕ್ರೋಷವನ್ನು ವ್ಯಕ್ತಪಡಿಸಿದರು.
ಇಲ್ಲಿನ ಸಂತ್ರಸ್ತರಿಗೆ ಬೆಳೆ ಪರಿಹಾರ, ಮನೆಕಳೆದುಕೊಂಡ ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕಾಗಿ 5 ಲಕ್ಷ ರೂ.ಗಳ ಪರಿಹಾರ ನೀಡಬೇಕು ಎಂಬ ಬೇಡಿಕೆಯ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಸೈಯದ ಅಬ್ದುಲ ಬಾರಿ, ಸಲಿಂ ಅಹ್ಮದ ಚಿತ್ತಾಪೂರ, ಮೋಬಿನ್ ಅಹ್ಮದ, ಸಲಿಂ ಸಗರಿ ಸೇರಿದಂತೆ ಹಲವರಿದ್ದರು.